ಮನೆ ಅಪರಾಧ ಶಿವಮೊಗ್ಗದಲ್ಲಿ ಕ್ರಿಕೆಟ್ ವಿಚಾರಕ್ಕೆ ಗಲಾಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

ಶಿವಮೊಗ್ಗದಲ್ಲಿ ಕ್ರಿಕೆಟ್ ವಿಚಾರಕ್ಕೆ ಗಲಾಟೆ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ!

0

ಶಿವಮೊಗ್ಗ : ಇತ್ತೀಚ್ಚಿಗೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಕ್ರಿಕೆಟ್ ಆಡುವ ವಿಚಾರವಾಗಿ ಕಿರಿಕ್ ನಡೆದು ಯುವಕನೋರ್ವನ ಕೊಲೆ ಮಾಡಲಾಗಿದ್ದು, ಮತ್ತೋರ್ವನಿಗೆ ಗಾಯಗಳಾದ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆಯಲ್ಲಿ ನಡೆದಿದೆ.

ಕೊಲೆಯಾದ ಯುವಕ ಅರುಣ್ (23), ಕೇಶವಪುರ ಬಡಾವಣೆಯ ನಿವಾಸಿಯಾಗಿದ್ದು, ಮಾರಕಾಸ್ತ್ರಗಳಿಂದ ಅವನು ಕೊಚ್ಚಿ ಕೊಲೆ ಮಾಡಲಾಗಿದೆ. ಸಂಜಯ್ (20) ಎಂಬ ಮತ್ತೊಬ್ಬ ಯುವಕ ಗಾಯಗೊಂಡಿದ್ದು, ಅವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ. ಗಲಾಟೆ ಸಂದರ್ಭದಲ್ಲಿ ಅರುಣ್ ಎಂಬ ವ್ಯಕ್ತಿಗೆ ಲಾಂಗ್ ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನೆ ತಿಳಿಯುತ್ತಿದ್ದಂತೆ, ಹೊಸಮನೆ ಬಡಾವಣೆ ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.