ಮನೆ ಸುದ್ದಿ ಜಾಲ ಶೇ.20 ರಷ್ಟು ಮಕ್ಕಳು ಬಾಲ ಕಾರ್ಮಿಕರಾಗಿದ್ದಾರೆ: ದೇವರಾಜ್ ಭೂತೆ

ಶೇ.20 ರಷ್ಟು ಮಕ್ಕಳು ಬಾಲ ಕಾರ್ಮಿಕರಾಗಿದ್ದಾರೆ: ದೇವರಾಜ್ ಭೂತೆ

0

ಮೈಸೂರು (Mysuru): ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯಿಂದ ಇನ್ನೂ ಶೇ.20ರಷ್ಟು ಮಕ್ಕಳು ಬಾಲಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ದೇವರಾಜ ಭೂತೆ ತಿಳಿಸಿದರು.


ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆಯ ಸ್ವಯಂ ಸೇವಾ ಸಂಘಗಳು ಹಾಗೂ ಮಕ್ಕಳ ಸಹಾಯವಾಣಿ 1098 ಇವರ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಜಾಥ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಪ್ರತಿಯೊಬ್ಬ ಸಾರ್ವಜನಿಕರು ಕೂಡ ಜವಾಬ್ದಾರಿಯನ್ನು ವಹಿಸಿಕೊಂಡು ಬಾಲಕಾರ್ಮಿಕರು ಕಂಡುಬಂದರೆ ಸಂಬಂಧಪಟ್ಟ ಇಲಾಖೆಗಳಿಗೆ, ಪೊಲೀಸರಿಗೆ, ಕಾನೂನು ಪ್ರಾಧಿಕಾರಕ್ಕೆ, ಜಿಲ್ಲಾಡಳಿತದ ಗಮನಕ್ಕೆ ತರಬೇಕು. ಇದರ ಬಗ್ಗೆ ಅರಿವು ಮೂಡಿಸುವುದರಿಂದ ಮುಂದಿನ ದಿನಗಳಲ್ಲಿ ಬಾಲಕಾರ್ಮಿಕ ಪದ್ದತಿಯನ್ನು ನಿರ್ಮೂಲನೆ ಮಾಡುವುದಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.


ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಾಯಕ ಕಾರ್ಮಿಕ ಆಯುಕ್ತರು ಹಾಗೂ ಸದಸ್ಯರ ಕಾರ್ಯದರ್ಶಿಗಳಾದ ನಾಜಿಯಾ ಸುಲ್ತಾನ ಅವರು ಮಾತನಾಡಿ ಕಾರ್ಯಕ್ರಮದ ಮುಖ್ಯ ಉದ್ದೇಶ ಜಿಲ್ಲೆಯಲ್ಲಿ ಇರುವಂತಹ ಎಲ್ಲಾ ಬಾಲಕಾರ್ಮಿಕರನ್ನು ತಡೆಹಿಡಿದು ಮರಳಿ ಶಾಲೆಗೆ ಬರುವಂತೆ ಕ್ರಮವಹಿಸುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ಉಪವಿಭಾಗದ ಕಾರ್ಮಿಕ ಅಧಿಕಾರಿಗಳಾದ ರಾಜೇಶ್ ಕೆ.ಜಾಧವ್ ಮತ್ತಿತರರು ಉಪಸ್ಥಿತರಿದ್ದರು.