ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 594 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 3,957,343ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40,066 ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
400 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3,913,353ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3882 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ582 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1,792,722ಕ್ಕೆ ಏರಿಕೆಯಾಗಿದೆ.














