ಮನೆ ಅಪರಾಧ ಶಾಸಕ ಸಿ. ಪುಟ್ಟರಂಗಶೆಟ್ಟಿ ಪುತ್ರ ಪಿ. ಚಾಮರಾಜು ನಿಧನ

ಶಾಸಕ ಸಿ. ಪುಟ್ಟರಂಗಶೆಟ್ಟಿ ಪುತ್ರ ಪಿ. ಚಾಮರಾಜು ನಿಧನ

0
Oplus_131072

ಯಳಂದೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್‌ಐಎಲ್ ಅಧ್ಯಕ್ಷ ಸಿ. ಪುಟ್ಟರಂಗಶೆಟ್ಟಿರವರ ಹಿರಿಯ ಪುತ್ರ ಟಿಎಪಿಸಿಎಂಎಸ್ ಮಾಜಿ ನಿರ್ದೇಶಕ ಪಿ. ಚಾಮರಾಜು (೪೨) ರವರು ಸೋಮವಾರ ನಿಧನ ಹೊಂದಿದ್ದಾರೆ.

ಅನಾರೋಗ್ಯದ ನಿಮಿತ್ತ ಇವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂಧಿಸದೆ ಇವರು ಮೃತಪಟ್ಟಿದ್ದಾರೆ. ಮೃತರು ತಂದೆ ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ, ತಾಯಿ ವೆಂಕಟಮ್ಮ, ಸಹೋದರ ಟಿಎಪಿಸಿಎಂಎಸ್ ಉಪಾದ್ಯಕ್ಷ ಕುಸುಮರಾಜು, ಪತ್ನಿ ಸುಪ್ರಿಯ ಸೇರಿದಂತೆ ಒಬ್ಬ ಪುತ್ರ ಹಾಗೂ ಒಬ್ಬ ಪುತ್ರಿ ಇಬ್ಬರು ಸಹೋದರಿಯರೂ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ಅಂತ್ಯಕ್ರಿಯೆಯು ತಾಲೂಕಿನ ಉಪ್ಪಿನಮೋಳೆ ಗ್ರಾಮದಲ್ಲಿರುವ ಇವರ ಜಮೀನಿನಲ್ಲಿ ಮಂಗಳವಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.