ಮನೆ ಅಪರಾಧ ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಯುವಕನ ಬಂಧನ!

ಪ್ರಧಾನಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ಮಾಡಿ ವೈರಲ್ : ಬೆಂಗಳೂರಿನಲ್ಲಿ ಯುವಕನ ಬಂಧನ!

0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.  ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.

“ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ವೈರಲ್ ವಿಡಿಯೋದಲ್ಲಿ ನವಾಜ್ ಹೇಳಿದ್ದಾನೆ.

ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ವೈರಲ್ ಮಾಡಿದ್ದ. ಇದನ್ನು ಆಧರಿಸಿ ಬಂಡೆಪಾಳ್ಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ಕೆಲವೇ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಪಾಕಿಸ್ತಾನದ ಪರ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ಬೆಳಕಿಗೆ ಬಂದಿತ್ತು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಬೆಂಗಳೂರಿನಲ್ಲಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ವೈರಲ್ ಆಗಿದೆ.