ಮನೆ ಪ್ರಕೃತಿ ಚಾಮರಾಜನಗರದಲ್ಲಿ ಸಮರ್ಪಕ ಮಳೆಯಾಗದಿದ್ದರೆ 154 ಗ್ರಾಮಗಳಿಗೆ ಕುಡಿಯುವ ನೀರಿಗೆ ಸಮಸ್ಯೆ!

ಚಾಮರಾಜನಗರದಲ್ಲಿ ಸಮರ್ಪಕ ಮಳೆಯಾಗದಿದ್ದರೆ 154 ಗ್ರಾಮಗಳಿಗೆ ಕುಡಿಯುವ ನೀರಿಗೆ ಸಮಸ್ಯೆ!

0

ಚಾಮರಾಜನಗರ: ಮುಂಬರುವ ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಜಿಲ್ಲೆಯ 154 ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ ಎಂದು ಚಾಮರಾಜನಗರದ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದರು.

ಕುಡಿಯುವ ನೀರು ನಿರ್ವಹಣೆ, ಜಾನುವಾರುಗಳಿಗೆ ಮೇವು ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ನಡೆಸಿದ ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು.

ಸದ್ಯ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ, ಆದರೆ ಮುಂಬರುವ ದಿನಗಳಲ್ಲಿ ಸಮರ್ಪಕವಾಗಿ ಮಳೆಯಾಗದಿದ್ದಲ್ಲಿ ಜಿಲ್ಲೆಯ 154 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗುವ ಸಾಧ್ಯತೆಯಿದೆ ಎಂದು ವಿವರಿಸಿದರು.

ಜಲಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು ಅಗತ್ಯ ಇರುವ ಕಡೆ ಬೋರ್‌ವೆಲ್‌ಗಳನ್ನು ಕೊರೆಸಬೇಕು. ಹಾಗೂ ಕೆಟ್ಟು ಹೋಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಕೂಡಲೇ ದುರಸ್ತಿಪಡಿಸಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.