ಮನೆ ಸ್ಥಳೀಯ ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ವಹಿಸಲಾಗುವುದು : ಜಿ.ಲಕ್ಷಿಕಾಂತ ರೆಡ್ಡಿ

ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ವಹಿಸಲಾಗುವುದು : ಜಿ.ಲಕ್ಷಿಕಾಂತ ರೆಡ್ಡಿ

0


ಮೈಸೂರು: ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೈತರ ಕುಂದುಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಮನೆಗೂ ನೀರು ಎಂಬುದು ಭಾರತ ಸರ್ಕಾರದ ಜಲ ಶಕ್ತಿ ಸಚಿವಾಲಯವು ೨೦೧೯ ರಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಪ್ರಾರಂಭಿಸಿದ ಯೋಜನೆಯಾಗಿದ್ದು, ೨೦೨೪ ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೆ ಪ್ರತಿ ದಿನ ನಿಯಮಿತವಾಗಿ ಟ್ಯಾಪ್ ನೀರನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳು ಸಮರ್ಪಕವಾಗಿ ರೀತಿಯಲ್ಲಿ ಆಗುತ್ತಿಲ್ಲ ಎಂಬ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಜನಜೀವನ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿ ಮಾರ್ಗ ಸೂಚಿ ಪ್ರಕಾರ ಸರಿಯಾಗಿ ಕಾಮಗಾರಿ ನಡೆಯುತ್ತಿರುವ ಬಗ್ಗೆ ಅಗತ್ಯ ಕ್ರಮ ವಹಿಸಲು ಜಿಲ್ಲಾ ಪಂಚಾಯತ್ ಅಧಿಕಾರಿಗಳಿಗೆ ಸೂಚಿಸಿದರು.

ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡಲು ಅಗತ್ಯ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು. ಕೃಷಿ ಚಟುವಟಿಕೆಗಳ ವೆಚ್ಚಕ್ಕೆ ಬ್ಯಾಂಕ್‌ಗಳಲ್ಲಿ ಚಿನ್ನ ಅಡವಿಟ್ಟು ಸಾಲ ಪಡೆದು ಬೇಸಾಯ ಮಾಡುತ್ತಾರೆ. ಈ ಸಂಬಂಧ ಬಡ್ಡಿ ಪಾವತಿ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಲೀಡ್ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಮಾತನಾಡಿ ಆರ್.ಬಿ.ಐ ಮಾರ್ಗಸೂಚಿ ಪ್ರಕಾರ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು ಈ ಬಗ್ಗೆ ರೈತರಿಗೆ ಸಂಪೂರ್ಣವಾದ ಮಾಹಿತಿ ನೀಡಲಾಗುವುದು ಎಂದು ಸಭೆಯಲ್ಲಿ ತಿಳಿಸಿದರು.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕಾರ್ಖಾನೆಯ ಮಾಲೀಕರ ಸಭೆ ಕರೆದು ಅವರ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕು.ಎರಡು ಸಕ್ಕರೆ ಕಾರ್ಖಾನೆಗಳಾದ ಚುಂಚನಕಟ್ಟೆ ಶ್ರಿರಾಮ ಸಕ್ಕರೆ ಹಾಗೂ ಬಣ್ಣಾರಿಯಮ್ಮ ಸಕ್ಕರೆ ಕಾರ್ಖಾನೆಯಲ್ಲಿನ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ರೈತ ಮುಖಂಡರು ಸಭೆಯಲ್ಲಿ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಮಾತನಾಡಿದ ಜಿಲ್ಲಾಧಿಕಾರಿಗಳು ಚುಂಚನಕಟ್ಟೆ ಶ್ರಿರಾಮ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒಪ್ಪಂದ ಆಗಿದೆ. ಈ ವರ್ಷ ಕಾರ್ಖಾನೆ ಆರಂಭ ಆಗುತ್ತದೆ. ಬಣ್ಣಾರಿಯಮ್ಮ ಸಕ್ಕರೆ ಕಾರ್ಖಾನೆ ನಡೆಯುತ್ತಿದ್ದು ಅಲ್ಲಿನ ಸಮಸ್ಯೆಗಳ ಬಗ್ಗೆ ಸಮಿತಿಯನ್ನು ರಚಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆ ಮಾಡುವುದು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಜವಾಬ್ದಾರಿ ಆಗಿರುತ್ತದೆ. ಕಳಪೆ ಬಿತ್ತನೆ ಬೀಜ ವಿತರಣೆ ಕಂಡುಬಂದರೆ ರೈತರು ತಕ್ಷಣ ಗಮನಕ್ಕೆ ತಂದರೆ ಶಿಘ್ರವಾಗಿ ಅಧಿಕಾರಿಗಳ ಮೂಲಕ ಪರಿಶೀಲನೆ ಮಾಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಕೆರೆಗಳ ಒತ್ತುವರಿ ತೆರವು, ಕೆರೆಗಳ ಹೂಳೆತ್ತುವುದು, ಫಸಲ್ ಭೀಮ ಯೋಜನೆ ತೋಟಗಾರಿಕೆ ಇಲಾಖೆ ಬೆಳೆಗಳಿಗೆ ವಿಸ್ತರಣೆ, ಸಮರ್ಪಕವಾಗಿ ಮಣ್ಣಿನ ಫಲವತ್ತತೆ ಪರೀಕ್ಷೆ ಮಾಡುವಂತೆ ಹಾಗೂ ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಬೆಳೆಗಳ ಬಗ್ಗೆ ಸಮರ್ಪಕವಾಗಿ ಮಾಹಿತಿ ನೀಡುವ ಈ ಎಲ್ಲಾ ಕುರಿತು ಅಗತ್ಯ ಕ್ರಮ ವಹಿಸುವಂತೆ ರೈತ ಮುಖಂಡರು ಸಭೆಯಲ್ಲಿ ಒತ್ತಾಯಿಸಿದರು.

ರಸ್ತೆ ಬದಿಯಲ್ಲಿ ನಡೆಯುವ ಗಿಡಗಳನ್ನು ನೆಟ್ಟು ಅದರ ನಿರ್ವಹಣೆ ಮಾಡಲಾಗುತ್ತಿದೆ. ವೈಜ್ಞಾನಿಕವಾಗಿ ಸಸಿ ನಡೆಯಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ ಬಸವರಾಜು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್.ಬಸವರಾಜು, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಾಜು, ಸವಿತಾ, ಜಂಟಿ ಕೃಷಿ ನಿರ್ದೇಶಕ ರವಿ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.