ಯಾದಗಿರಿ : ಯಾದಗಿರಿಯ ಮೊಟ್ನಳ್ಳಿ ಗ್ರಾಮದ ಹೊರವಲಯದಲ್ಲಿ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬಟ್ಟೆ ತೊಳೆಯಲು ಬಾವಿಗೆ ಹೋದ ಇಬ್ಬರು ಯುವತಿಯರು ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಮೃತ ಯುವತಿಯರನ್ನು ವೈಶಾಲಿ (17) ಮತ್ತು ನವೀತಾ (16) ಎಂದು ಗುರುತಿಸಲಾಗಿದೆ. ಇವರು ಬಟ್ಟೆ ತೊಳೆಯಲು ಬಾವಿಗೆ ಹೋದಾಗ ಕಾಲು ಜಾರಿ ಬಾವಿಗೆ ಬಿದ್ದಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಕೂಡಲೇ ಧಾವಿಸಿ ಶವಗಳನ್ನು ಹೊರತೆಗೆದಿದ್ದಾರೆ.
ಈ ಘಟನೆ ಗುರುಮಠಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.














