ಮನೆ ಮಠ ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮಿಗಳು ಲಿಂಗೈಕ್ಯ

ಸಾಲೂರು ಮಠದ ಹಿರಿಯ ಶ್ರೀ ಗುರುಸ್ವಾಮಿಗಳು ಲಿಂಗೈಕ್ಯ

0

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಶ್ರೀ ಸಾಲೂರು ಬ್ರಹ್ಮಮಠದ ಹಿರಿಯ ಶ್ರೀ ಗುರುಸ್ವಾಮಿಗಳು (ವಯಸ್ಸು 75) ಇಂದು ಲಿಂಗೈಕ್ಯರಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಶ್ರೀಗಳು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಶಾರೀರಿಕ ಸ್ಥಿತಿಯಲ್ಲಿ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ವೈದ್ಯಕೀಯ ಪ್ರಯತ್ನಗಳು ಫಲಕಾರಿಯಾಗದೆ ಇಂದು ಬೆಳಿಗ್ಗೆ ಶ್ರೀಗಳು ಲಿಂಗೈಕ್ಯರಾದರು ಎಂದು ಮಠದ ಮೂಲಗಳು ದೃಢಪಡಿಸಿವೆ.

ಮಠದ ಶಿಷ್ಯವೃಂದ ಹಾಗೂ ಸ್ಥಳೀಯ ಜನತೆ ಶ್ರೀಗಳ ಅಂತಿಮ ದರ್ಶನಕ್ಕಾಗಿ ಮಠಕ್ಕೆ ಹರಿದು ಬರುತ್ತಿದ್ದಾರೆ. ಶ್ರೀಗಳ ಅಂತ್ಯಕ್ರಿಯೆ ಇಂದು ಸಂಜೆ 5 ಗಂಟೆಗೆ ಮಠದ ಆವರಣದಲ್ಲಿ ನಡೆಯಲಿದ್ದು, ಸುತ್ತೂರು ಶ್ರೀಗಳು ಹಾಗೂ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.