ಮನೆ ರಾಜ್ಯ ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ

ಲಂಚ ಪ್ರಕರಣ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಸಕ್ಷಮ ಪ್ರಾಧಿಕಾರದ ಅನುಮತಿ

0

ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನಗೆ ಬಿಗ್ ಶಾಕ್ ಎದುರಾಗಿದ್ದು, ಲಂಚ ಸ್ವೀಕಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಕ್ಷಮ ಪ್ರಾಧಿಕಾರದಿಂದ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜುಗೆ ಕಸ ವಿಲೇವಾರಿ ಗುತ್ತಿಗೆ ನೀಡಲು ಶಾಸಕ ಮುನಿರತ್ನ ಅವರು 36 ಲಕ್ಷ ರೂ. ಲಂಚ ಕೇಳಿದ್ದು, 20 ಲಕ್ಷ ರೂ. ಈಗಾಗಲೆ ಸ್ವೀಕರಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಮುನಿರತ್ನ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ 1988ರ ಅಡಿ ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಂಎಲ್ಎ ಮುನಿರತ್ನ ವಿರುದ್ಧ ತನಿಖೆಗೆ ಸಿಐಡಿ ಪೋಲಿಸ್ ಮಹಾ ನಿರ್ದೇಶಕರು ಸಕ್ಷಮ ಪ್ರಾಧಿಕಾರಕ್ಕೆ ಅನುಮತಿ ಕೋರಿದ್ದರು. ಸಕ್ಷಮ ಪ್ರಾಧಿಕಾರ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.