ಮೈಸೂರು: ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹಠಾತ್ ಏರಿಕೆ ಕಂಡಿರುವುದರಿಂದ, ಆರೋಗ್ಯ ಇಲಾಖೆ ಮತ್ತು ರಾಜ್ಯ ಸರ್ಕಾರ ಮುಂಜಾಗೃತಾ ಕ್ರಮಗಳನ್ನು ಕೈಗೆತ್ತಿಕೊಂಡಿವೆ. ಜನದಟ್ಟಣೆ ಪ್ರದೇಶಗಳಲ್ಲಿ ಸಾರ್ವಜನಿಕರು ಓಡಾಡುವಾಗ ಮಾಸ್ಕ್ ಧರಿಸುವಂತೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ತಾವೇ ಮಾಸ್ಕ್ ಧರಿಸಿ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುವುದು ಮಹತ್ವದ ಸಂದೇಶವನ್ನು ನೀಡಿದೆ. ಮೈಸೂರಿನ ತಮ್ಮ ನಿವಾಸದ ಬಳಿ ಸಿಎಂ ಸಿದ್ದರಾಮಯ್ಯ ಮಾಸ್ಕ್ ಧರಿಸಿ ಜನತಾ ದರ್ಶನ ಮಾಡಿದ್ದಾರೆ.
ಮುಖ್ಯ ಅಂಶಗಳು:
- ಕಳೆದ ಕೆಲ ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ 35 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
- ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಸಾರ್ವಜನಿಕರು ಜನದಟ್ಟಣೆ ಇರುವ ಸ್ಥಳಗಳಲ್ಲಿ ಮಾಸ್ಕ್ ಧರಿಸಲು ಸೂಚಿಸಲಾಗಿದೆ.
- ನಾಳೆಯಿಂದ ರಾಜ್ಯದ ಮೆಡಿಕಲ್ ಕಾಲೇಜುಗಳು, ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಟೆಸ್ಟ್ ಪುನಾರಂಭಗೊಳ್ಳಲಿದೆ.
- ಸೋಂಕು ನಿಯಂತ್ರಣಕ್ಕೆ ಕೋವಿಡ್ ಟೆಸ್ಟ್ ಲ್ಯಾಬ್‌ಗಳನ್ನು ಮತ್ತೆ ಸಜ್ಜುಗೊಳಿಸಲು ತಯಾರಿ ನಡೆದಿದೆ.
ಈ ಹೆಚ್ಛುತ್ತಿರುವ ಸೋಂಕಿನ ನಡುವೆಯೂ ಸಾರ್ವಜನಿಕರು ನಿಗದಿತ ಮಾರ್ಗಸೂಚಿಗಳನ್ನು ಪಾಲಿಸುವುದು ಅಗತ್ಯ. ಮಾಸ್ಕ್ ಧರಿಸುವುದು, ಕೈ ತೊಳೆಯುವುದು, ಮತ್ತು ಭೌತಿಕ ಅಂತರ ಕಾಯ್ದುಕೊಳ್ಳುವುದು ಸೂಕ್ತ.















