ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನಲ್ಲಿ ನಿಜಕ್ಕೂ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೇವಲ ಐದು ವರ್ಷದ ಬಾಲಕನೊಬ್ಬ ತನ್ನ ಮನೆಯಲ್ಲೇ ಆಟವಾಡುತ್ತಿದ್ದು, ಅಚಾನಕ್ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ದುರ್ಘಟನೆಯಲ್ಲಿ ಮಗನನ್ನು ರಕ್ಷಿಸಲು ಮುಂದಾದ ತಾಯಿಯೂ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತ ಬಾಲಕನನ್ನು ಸಂಜೀವ್ (5) ಎಂದು ಗುರುತಿಸಲಾಗಿದೆ. ಸಂಜೀವ್ ತನ್ನ ಮನೆಯಲ್ಲಿ ಸಾಮಾನ್ಯವಾಗಿ ಆಟವಾಡುತ್ತಿದ್ದಾಗ, ಕಣ್ಣಾಮುಚ್ಚಾಲೆ ಆಟದಲ್ಲಿ ಮನೆಯ ಬಾಗಿಲು ತೆಗೆಯುತ್ತಿದ್ದ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ಕುಸಿದು ಬಿದ್ದಿದ್ದಾನೆ. ವಿದ್ಯುತ್ ಶಾಕ್ ನಿಂದ ಸಂಜೀವ್ ಸಾವನ್ನಪ್ಪಿದ್ದಾನೆ.
ತಮ್ಮ ಮಗನನ್ನು ಶಾಕ್‌ನಿಂದ ತಪ್ಪಿಸಲು ತಾಯಿ ತಕ್ಷಣವೇ ಧಾವಿಸಿ ಮಗುವನ್ನು ಎತ್ತಲು ಪ್ರಯತ್ನಿಸಿದ್ದರೂ, ಆಕೆಯ ಕೈಗೂ ಶಾಕ್ ತಗುಲಿ ತಾವೂ ಬಿದ್ದುಬಿಟ್ಟಿದ್ದಾರೆ. ಸ್ಥಳೀಯರು ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯಕೀಯ ವರದಿಯ ಪ್ರಕಾರ ತಾಯಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಲಾಗಿದೆ. ಪಾಂಡವಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.














