ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ಹೃದಯವಿದ್ರಾವಕ ಮತ್ತು ಆತಂಕ ಹುಟ್ಟಿಸುವ ಘಟನೆ ನಡೆದಿದೆ. ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿರುವ ಮನೆಯಲ್ಲಿ ಒಂಟಿಯಾಗಿ ಇದ್ದ ಮಹಿಳೆ ಲತಾ ಅವರನ್ನು ಭೀಕರವಾಗಿ ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ಅಂದಾಜು ₹1 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ.
ಹತ್ಯೆಗೈಯಲ್ಪಟ್ಟವರು ಲತಾ (ವಯಸ್ಸು-40) ಬಟ್ಟೆ ಹೋಲ್ ಸೇಲ್ ವ್ಯಾಪಾರಿ ಪ್ರಕಾಶ್ ಅವರ ಪತ್ನಿ ಎಂದು ತಿಳಿದು ಬಂದಿದೆ. ಲತಾ ಅವರು ಮನೆಯಲ್ಲೊಬ್ಬರೇ ಇದ್ದ ವೇಳೆ ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ. ನಂತರ ಮನೆಯಲ್ಲಿದ್ದ ₹1 ಕೋಟಿಗೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಅಪಹರಿಸಿ ದರೋಡೆಗಾರರು ಪರಾರಿಯಾಗಿದ್ದಾರೆ
ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.














