ಬೆಂಗಳೂರು (Bengaluru): ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,58,824ಕ್ಕೆ ಏರಿಕೆಯಾಗಿದೆ.
ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 40,068 ಇದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,14,343ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 791 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,94,128ಕ್ಕೆ ಏರಿಕೆಯಾಗಿದೆ.