ಮನೆ ರಾಜ್ಯ ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ 4% ಮೀಸಲಾತಿ : ರಾಜ್ಯಪಾಲರಿಗೆ ತಿದ್ದುಪಡಿ ಮಸೂದೆ ಮರುಸಲ್ಲಿಕೆ!

ಗುತ್ತಿಗೆಯಲ್ಲಿ ಮುಸ್ಲಿಂ ಸಮಯದಾಯಕ್ಕೆ 4% ಮೀಸಲಾತಿ : ರಾಜ್ಯಪಾಲರಿಗೆ ತಿದ್ದುಪಡಿ ಮಸೂದೆ ಮರುಸಲ್ಲಿಕೆ!

0

ಬೆಂಗಳೂರು: ಕರ್ನಾಟಕ ಸರ್ಕಾರವು ಮುಸ್ಲಿಂ ಸಮುದಾಯದ ಗುತ್ತಿಗೆದಾರರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ 4 ಶೇಕಡಾ ಮೀಸಲಾತಿ ನೀಡುವ ತಿದ್ದುಪಡಿ ಮಸೂದೆಯನ್ನು ರಾಜ್ಯಪಾಲರ ಬಳಿ ಮರುಸಲ್ಲಿಸಿದೆ. ಮೊದಲ ಬಾರಿ ಮಸೂದೆಯನ್ನು ರಾಜ್ಯಪಾಲರು ಸ್ಪಷ್ಟೀಕರಣ ಕೇಳಿ ಅನುಮೋದಿಸದಿದ್ದರಿಂದ, ಸರ್ಕಾರ ಈಗ ಹೆಚ್ಚಿನ ವಿವರಗಳೊಂದಿಗೆ ಮಸೂದೆಯನ್ನು ಮತ್ತೆ ಸಲ್ಲಿಸಿದೆ.

ಈ ತಿದ್ದುಪಡಿ ಮಸೂದೆಯು, ಸರ್ಕಾರದ ಸಾರ್ವಜನಿಕ ಗುತ್ತಿಗೆಗಳಲ್ಲಿ ಮುಸ್ಲಿಂ ಸಮುದಾಯದ ಗುತ್ತಿಗುದಾರರಿಗೆ 4% ಮೀಸಲಾತಿ ಒದಗಿಸುವ ಉದ್ದೇಶ ಹೊಂದಿದೆ. ಈ ಪಾರದರ್ಶಕತೆ ಹಾಗೂ ಮೀಸಲಾತಿ ನಿಯಮಾವಳಿಗಳನ್ನು ಸದೃಢಗೊಳಿಸುವ ಪ್ರಯತ್ನವಾಗಿದೆ.

ಈ ವಿಧೇಯಕ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕಾರಗೊಂಡಿತ್ತು. ನಂತರ ರಾಜ್ಯಪಾಲರ ಬಳಿ ಅಂಗೀಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ರಾಜ್ಯಪಾಲರು ಅನುಮೋದಿಸದೆ ಸರ್ಕಾರಕ್ಕೆ ಹೆಚ್ಚಿನ ಸ್ಪಷ್ಟನೆ ಕೇಳಿದ್ದರು. ಇದೀಗ, ರಾಜ್ಯ ಸರ್ಕಾರ ಹೆಚ್ಚಿನ ಸ್ಪಷ್ಟನೆಗಳೊಂದಿಗೆ ರಾಜ್ಯಪಾಲರಿಗೆ ಮತ್ತೆ ವಿಧೇಯಕ ಕಳುಹಿಸಿದ್ದು, ಅನುಮೋದಿಸುವಂತೆ ಮನವಿ ಮಾಡಿದೆ.

ಕರ್ನಾಟಕದಲ್ಲಿ ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ ನೀಡುವ ತಿದ್ದುಪಡಿ ಮಸೂದಿಯನ್ನು ರಾಜ್ಯಪಾಲರು ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಲು ಅನುಮೋದಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. 15 ಮತ್ತು 16ನೇ ವಿಧಿಗಳು ಧರ್ಮ ಆಧಾರಿತ ಮೀಸಲಾತಿಯನ್ನು ನಿಷೇಧಿಸುವುದು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲೇಖಿಸಿ, ಯಾವುದೇ ಮೀಸಲಾತಿ ಕ್ರಮಗಳು ಸಾಮಾಜಿಕ-ಆರ್ಥಿಕ ಅಂಶಗಳನ್ನು ಆಧರಿಸಿರಬೇಕು ಎಂದು ರಾಜ್ಯಪಾಲರ ಹೇಳಿಕೆಯಲ್ಲಿ ತಿಳಿಸಲಾಗಿದೆ.

ರಾಜಭವನದಿಂದ ನೀಡಿದ ಅಧಿಕೃತ ಹೇಳಿಕೆಯಲ್ಲಿ, “ಸಂವಿಧಾನವು ಧರ್ಮದ ಆಧಾರದ ಮೇಲೆ ಮೀಸಲಾತಿಗೆ ಅವಕಾಶ ನೀಡುವುದಿಲ್ಲ. ಮುಸ್ಲಿಮರನ್ನು ಮಾತ್ರ ಒಳಗೊಂಡ ಹಿಂದುಳಿದ ವರ್ಗ ವರ್ಗ-II (ಬಿ)ಗೆ 4% ಮೀಸಲಾತಿ ನೀಡುವ ಪ್ರಸ್ತಾವಿತ ತಿದ್ದುಪಡಿ ಧರ್ಮದ ಆಧಾರದ ಮೇಲೆ ಸಮುದಾಯಕ್ಕೆ ನೀಡಿದ ಮೀಸಲಾತಿ ಎಂದು ಅರ್ಥೈಸಬಹುದು” ಎಂದು ಸ್ಪಷ್ಟಪಡಿಸಲಾಗಿದೆ.

ಈ ತಿದ್ದುಪಡಿ ಮಸೂದೆ ಮುಸ್ಲಿಂ ಸಮುದಾಯದ ಗುತ್ತಿಗುದಾರರಿಗೆ ಸರ್ಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಲು ಉದ್ದೇಶಿಸಲಾಗಿದೆ. ಈ ಮಸೂದೆಯನ್ನು ಮಾರ್ಚ್‌ನಲ್ಲಿ ನಡೆದ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಆದರೆ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಇದರ ವಿರುದ್ಧ “ಅಸಂವಿಧಾನಿಕ” ಎಂದು ಕಠಿಣ ಟೀಕೆಗಳನ್ನು ಮಾಡಿದ್ದಾರೆ. ವಿಶೇಷವಾಗಿ, ಬಿಜೆಪಿ ಈ ಮೀಸಲಾತಿಯನ್ನು ಅಲ್ಪಸಂಖ್ಯಾತರ ತುಷ್ಟೀಕರಣ ಎಂದು ಆರೋಪಿಸಿತ್ತು.