ಮನೆ ರಾಜ್ಯ ಅಬ್ದುಲ್ ರಹೀಂ ಹತ್ಯೆ ಪ್ರಕರಣ: ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ : ಸಚಿವ ದಿನೇಶ್...

ಅಬ್ದುಲ್ ರಹೀಂ ಹತ್ಯೆ ಪ್ರಕರಣ: ಆರೋಪಿಗಳನ್ನು ಪತ್ತೆ ಹಚ್ಚಿ ಕಾನೂನು ಕ್ರಮ : ಸಚಿವ ದಿನೇಶ್ ಗುಂಡೂರಾವ್

0

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳತ್ತಮಜಲು ಗ್ರಾಮದಲ್ಲಿ ಸಂಭವಿಸಿದ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ದುರ್ಘಟನೆಯು ಯಾವುದೇ ರೀತಿಯ ಅಹಿತಕರ ಪರಿಸ್ಥಿತಿ ಉಂಟು ಮಾಡದಂತೆ ಜಿಲ್ಲೆಯಲ್ಲಿ ಕಟ್ಟೆಚ್ಚರ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು. ಅಬ್ದುಲ್ ರಹೀಂ ಅವರ ಅಂತ್ಯಕ್ರಿಯೆ ಸಂದರ್ಭದಲ್ಲಿಯೂ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಾಂತಿ ಭದ್ರತೆ ಕಾಪಾಡುವಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸಚಿವರು ಮಾತನಾಡುವ ವೇಳೆ, “ಈ ಪ್ರಕರಣದಲ್ಲಿ ಯಾವುದೇ ಜಾತಿ ಅಥವಾ ಧರ್ಮ ಆಧಾರಿತ ರಾಜಕೀಯ ಮಾಡದೆ, ನ್ಯಾಯಕ್ಕೆ ಅಂಕುಡೊಂಕಿಲ್ಲದೆ ಮುನ್ನಡೆಯಲಾಗುವುದು. ಕೊಲೆಗಡುಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ನಿರ್ದೇಶಿಸಲಾಗಿದೆ. ಯಾರೇ ತಪ್ಪಿತಸ್ಥರಾಗಿರಲಿ, ಎಷ್ಟೇ ಪ್ರಭಾವಿಗಳಾಗಿರಲಿ, ಅವರ ಹೆಡಿಮುರಿ ಕಟ್ಟಿ, ಅಗತ್ಯ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.

ಇದೇ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪ ಗೃಹಸಚಿವರು ಮಾಡಿದ್ದು, “ಬಿಜೆಪಿ ಶವ ರಾಜಕಾರಣ ಮಾಡುತ್ತಿದೆ. ಸಮಾಜದಲ್ಲಿ ಕೋಮು ದ್ವೇಷವನ್ನ ಬಿತ್ತುವ ಪ್ರಚೋದನಾತ್ಮಕ ಭಾಷಣಗಳನ್ನು ನೀಡುತ್ತಿರುವುದು ಖಂಡನೀಯ. ನಾವು ಯಾವುದೇ ಭೇದಭಾವವಿಲ್ಲದೆ, ನಿಷ್ಪಕ್ಷಪಾತ ತನಿಖೆ ನಡೆಸಿ ಕ್ರಮ ಕೈಗೊಂಡಿದ್ದೇವೆ” ಎಂದು ಹೇಳಿದ್ದಾರೆ.

ಮಂಗಳೂರು ಮತ್ತು ಇತರ ಪ್ರದೇಶಗಳಲ್ಲಿ ನಡೆದ ಹಿಂದಿನ ಕೊಲೆ ಪ್ರಕರಣಗಳನ್ನು ಉಲ್ಲೇಖಿಸಿದ ಸಚಿವರು, ಅಮಾಯಕ ಅಶ್ರಫ್ ಹತ್ಯೆ ಪ್ರಕರಣ ಹಾಗೂ ರೌಡಿಶಿಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಗಳಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಲಾಗಿದೆ ಎಂಬುದನ್ನು ಸ್ಮರಿಸಿದರು. ಅಬ್ದುಲ್ ರಹೀಂ ಪ್ರಕರಣವನ್ನೂ ಶೀಘ್ರದಲ್ಲಿ ಹಿಮ್ಮೆಟ್ಟಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ರೀತಿಯ ಪ್ರತಿಕಾರದ ಹತ್ಯೆಗಳನ್ನು ತಡೆಗಟ್ಟುವ ಸಲುವಾಗಿ, ಕರಾವಳಿ ಭಾಗದಲ್ಲಿ ವಿಶೇಷ ‘ಕೋಮು ನಿಗ್ರಹ ದಳ’ವನ್ನು ರಚಿಸಲಾಗುತ್ತಿದೆ. ಈ ದಳವು ಶೀಘ್ರದಲ್ಲೇ ಕಾರ್ಯಾರಂಭಿಸಲಿದೆ ಎಂದು ಅವರು ತಿಳಿಸಿದರು. ಕೊನೆಗೆ, “ಕೋಮುವಾದದಿಂದ ಉಂಟಾಗುವ ಒಡಕುಗಳಿಗೆ ಸಮಾಜದಲ್ಲಿ ಸ್ಥಳವಿಲ್ಲ. ಶಾಂತಿಯುತ ಸಹಬಾಳ್ವೆ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಮುಂದಾಗಬೇಕು” ಎಂದು ಮನವಿ ಮಾಡಿದರು.