ಮನೆ ಸ್ಥಳೀಯ ನಟ ಕಮಲ್ ವಿರುದ್ಧ ಬಿಎಸ್‌ವೈ ಆಕ್ರೋಶ

ನಟ ಕಮಲ್ ವಿರುದ್ಧ ಬಿಎಸ್‌ವೈ ಆಕ್ರೋಶ

0

ಮೈಸೂರು : ನಟ ಕಮಲ್ ಹಾಸನ್ ಹೇಳಿಕೆ ಅವರಿಗೆ ಶೋಭೆ ತರುವಂತಹದಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಚಾಮುಂಡಿ ಬೆಟ್ಟಕ್ಕೆ ಇಂದು ಕುಟುಂಬ ಸಮೇತ ಆಗಮಿಸಿದ ಅವರು ಶ್ರೀಚಾಮುಂಡೇಶ್ವರಿ ತಾಯಿ ದರ್ಶನ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಈಗಾಗಲೇ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಅವರು ಇಂತಹ ಹೇಳಿಕೆ ನೀಡಬಾರದಿತ್ತು. ಅವರ ಹೇಳಿಕೆ ಶೋಭೆ ತರುವಂತಹದಲ್ಲ ಎಂದು ಹೇಳಿದರು.

ನಮ್ಮ ಮನೆಯ ಮದುವೆ ಸಂಬಂಧ ಶ್ರೀಚಾಮುಂಡೇಶ್ವರಿ ತಾಯಿ ದರ್ಶನಕ್ಕೆ ಆಗಮಿಸಿದ್ದೇನೆ. ನನ್ನ ಮೊಮ್ಮಗನ ಮದುವೆ ಕಾರ್ಯಕ್ರಮ ಸುಲಲಿತವಾಗಿ ನಡೆಯಲಿ ಎಂದು ದೇವರಲ್ಲಿ ಪೂಜೆ ಸಲ್ಲಿಸಿದ್ದೇವೆ. ಹಾಗಾಗಿ ಯಾವುದೇ ರಾಜಕೀಯ ಮಾತನಾಡುವುದಿಲ್ಲ ಎಂದು ಹೇಳಿದರು.