ಮೈಸೂರು : ಆಧುನಿಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಹಮ್ಮಿಕೊಂಡಿದ್ದು, ಜೂನ್ 4 ರಂದು ಬೆಳಿಗ್ಗೆ 8.30 ಗಂಟೆಗೆ ಅರಮನೆ ಆವರಣದಲ್ಲಿ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಕೆ. ಆರ್. ವೃತ್ತದಲ್ಲಿರುವ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮೆರವಣಿಗೆ ಕಲಾಮಂದಿರ ತಲುಪುವುದು. ನಂತರ ವೇದಿಕೆ ಕಾರ್ಯಕ್ರಮವನ್ನು 11.30 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಪ್ರಾರಂಭಿಸಲಾಗಿದೆ.
ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಉಪಗಳಾದ ಡಿ. ಕೆ. ಶಿವಕುಮಾರ್, ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಖಾತೆ ಸಚಿವರಾದ ಎಚ್. ಡಿ. ಕುಮಾರಸ್ವಾಮಿ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ, ಜಲಶಕ್ತಿ ಮತ್ತು ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್. ಸಿ. ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ. ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಘನ ಉಪಸ್ಥಿತಿಯಲ್ಲಿ, ಮೈಸೂರು ರಾಜ ವಂಶಸ್ಥರು ಹಾಗೂ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದಾರೆ. ಚಾಮರಾಜ ವಿಧಾನ ಸಭೆ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಗೃಹ ಸಚಿವರಾದ ಡಾ. ಜಿ. ಪರಮೇಶ್ವರ, ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್. ಕೆ. ಪಾಟೀಲ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ. ಎಚ್. ಮುನಿಯಪ್ಪ, ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗ ರೆಡ್ಡಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರಾದ ಎಂ. ಬಿ. ಪಾಟೀಲ್, ಇಂಧನ ಸಚಿವರಾದ ಕೆ. ಜೆ. ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಆರೋಗ್ಯ ಸಚಿವರು ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ್, ವಸತಿ ಹಾಗೂ ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಸಚಿವರಾದ ಬಿ. ಝಡ್. ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ, ಅರಣ್ಯ, ಜೀವಶಾಸ್ತ್ರ ಹಾಗೂ ಪರಿಸರ ಸಚಿವರಾದ ಈಶ್ವರ್ ಖಂಡ್ರೆ, ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವರಾದ ಎಸ್. ಎಸ್. ಮಲ್ಲಿಕಾರ್ಜುನ್, ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ ಖಾನ್, ಕಾರ್ಮಿಕ ಸಚಿವರಾದ ಸಂತೋಷ್ ಎಸ್. ಲಾಡ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣ ಪ್ರಕಾಶ್ ರುದ್ರಪ್ಪ ಪಾಟೀಲ್, ಅಬಕಾರಿ ಸಚಿವರಾದ ಆರ್. ಬಿ. ತಿಮ್ಮಾಪುರ, ಯೋಜನೆ ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಸಚಿವರಾದ ಡಿ. ಸುಧಾಕರ್, ಸಹಕಾರ ಸಚಿವರಾದ ಕೆ. ಎನ್. ರಾಜಣ್ಣ, ನಗರಾಭಿವೃದ್ಧಿ ಸಚಿವರಾದ ಸುರೇಶ ಬಿ. ಎಸ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಳರ್, ಮೀನುಗಾರಿಕೆ ಬಂದರು ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ವೈದ್ಯ, ಪ್ರಾಥಮಿಕ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್. ಭೋಸರಾಜು, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಎಚ್. ಡಿ. ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ್ ಕುಮಾರ್ ಸಿ., ಅಧ್ಯಕ್ಷರು ಚಾಮುಂಡೇಶ್ವರಿ ಅನಿಲ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಶಾಸಕರಾದ ಎ. ಬಿ. ರಮೇಶ್ ಬಂಡಿಸಿದ್ದೇಗೌಡ, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಸದಸ್ಯರಾದ ಸುನೀಲ್ ಬೋಸ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನರಸಿಂಹರಾಜ ವಿಧಾನಸಭೆ ಕ್ಷೇತ್ರದ ಶಾಸಕರಾದ ತನ್ವೀರ್ ಸೇರ್, ಚಾಮುಂಡೇಶ್ವರಿ ವಿಧಾನಸಭೆ ಕ್ಷೇತ್ರ ಶಾಸಕರಾದ ಜಿ. ಟಿ. ದೇವೇಗೌಡ, ಕೆ. ಆರ್. ನಗರ ವಿಧಾನಸಭೆ ಕ್ಷೇತ್ರದ ರವಿಶಂಕರ್ ಡಿ., ಹುಣಸೂರು ವಿಧಾನಸಭೆ ಕ್ಷೇತ್ರದ ಜಿ. ಡಿ. ಹರೀಶ್ ಗೌಡ, ನಂಜನಗೂಡು ವಿಧಾನ ಸಭೆ ಕ್ಷೇತ್ರದ ಶಾಸಕರಾದ ದರ್ಶನ್ ಧ್ರುವನಾರಾಯಣ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್. ಶ್ರೀವತ್ಸ, ವಿಧಾನ ಪರಿಷತ್ತಿನ ಶಾಸಕರಾದ ಎಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ. ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತೀಂದ್ರ ಎಸ್., ಕೆ. ವಿವೇಕಾನಂದ, ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲನಯನ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಸಮಾರಂಭದ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಉಪಯೋಗಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್. ಸೆಲ್ವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಎಂ. ವಿ. ವೆಂಕಟೇಶ್ ಅವರು ಗೌರವ ಉಪಸ್ಥಿತರಿರುವರು. ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕರಾದ ಡಾ. ಅನಿತಾ ಎಂ. ಎಸ್. ಅವರು ಉಪನ್ಯಾಸ ಮಾಡಲಿದ್ದಾರೆ.
ದಾರ್ಶನಿಕ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕುರಿತು ಸಾಕ್ಷ್ಯಚಿತ್ರ ಪ್ರದರ್ಶನವನ್ನು ಕರ್ನಾಟಕ ಕಲಾಮಂದಿರದಲ್ಲಿ ಹಾಗೂ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಕುರಿತಾದ ಸಂಗ್ರಹಿಸಿದ ಭಾವಚಿತ್ರಗಳನ್ನು ಕರ್ನಾಟಕ ಕಲಾ ಆವರಣದ ಸುಚಿತ್ರ ಆರ್ಟ್ ಗ್ಯಾಲರಿಯಲ್ಲಿ ಮಾಡಿದರು.
ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜೀವನ ಮತ್ತು ಸಾಧನೆ ಕುರಿತು ರಾಜ್ಯ ಮಟ್ಟದ ಚಿತ್ರಕಲಾ ಸ್ಪರ್ಧೆ ಬೆಳಿಗ್ಗೆ 8.30 ಗಂಟೆಗೆ ಏರ್ಪಡಿಸಲಾಗಿದೆ. 6 ರಿಂದ 13 ವರ್ಷ ಮತ್ತು 14 ರಿಂದ 18 ವರ್ಷ ವಯೋಮಿತಿಗೆ ಒಳಪಟ್ಟಂತೆ ಎರಡು ವಿಭಾಗಗಳಾಗಿ ವಿಂಗಡಿಸಿ, ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.














