ಮನೆ ಅಪರಾಧ ಬೈಕ್ ಗೆ ಟಿಪ್ಪರ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಬೈಕ್ ಗೆ ಟಿಪ್ಪರ್ ಡಿಕ್ಕಿ ಸ್ಥಳದಲ್ಲೇ ಇಬ್ಬರು ಯುವಕರ ಸಾವು

0

ಪಿರಿಯಾಪಟ್ಟಣ: ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಜರುಗಿದೆ.

ಮೃತ ದುರ್ದೈವಿಗಳು ತಾಲೂಕಿನ ಹಿಟ್ನೆ ಹೆಬ್ಬಾಗಿಲು ಗ್ರಾಮದ ಶಂಕರ್(30) ಮತ್ತು ನಿಲಂಗಾಲ ಗ್ರಾಮದ ಶೇಖರ್ (22) ಎಂದು ತಿಳಿದು ಬಂದಿದೆ.

ಈ ಇಬ್ಬರು ಪಿರಿಯಾಪಟ್ಟಣದಿಂದ ಕೊಣನೂರು ಮಾರ್ಗವಾಗಿ ತೆರಳುತ್ತಿದ್ದಾಗ ಬೆಟ್ಟದಪುರ -ಹಾಸನ ಮುಖ್ಯ ರಸ್ತೆಯ ಗೊರಹಳ್ಳಿ ಗ್ರಾಮದ ಚೆನ್ನಯ್ಯನಕೆರೆ ಬಳಿ ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮಮ ಬೈಕ್ ಸವಾರರಿಬ್ಬರು ಸ್ಥಳದಲ್ಲೆ ಸಾವನಪ್ಪಿದ್ದಾರೆ.

ಈ ಕುರಿತು ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮೃತಪಟ್ಟವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.