ಬೆಂಗಳೂರು: ರಾಜ್ಯ ಸರ್ಕಾರವು ಜೂನ್ 12, 2025ರಂದು ‘ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ’ ವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸುವಂತೆ ಆದೇಶ ಹೊರಡಿಸಿದೆ. ಈ ಕುರಿತು ಜಿಲ್ಲಾಡಳಿತಗಳಿಗೆ ನಿರ್ದೇಶನಗಳೊಂದಿಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದ ಪ್ರಮುಖ ಸೂಚನೆಗಳನ್ನು ನೀಡಲಾಗಿದೆ.
ಅಂತರಾಷ್ಟ್ರೀಯ ಕಾರ್ಮಿಕ ಸಂಸ್ಥೆ ಘೋಷಿಸಿರುವಂತೆ, ವಿಶ್ವ ಸಂಸ್ಥೆಯ ಎಲ್ಲಾ ಮಿತ್ರ ರಾಷ್ಟ್ರಗಳು ಪ್ರತಿ ವರ್ಷ ಜೂನ್-12 ರಂದು “ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ”ವನ್ನಾಗಿ ಆಚರಿಸಲಾಗುತ್ತಿದೆ.
ಕರ್ನಾಟಕ ಸರ್ಕಾರವೂ ಪ್ರತಿವರ್ಷ ಈ ದಿನದ ಆಚರಣೆಗೆ ಕ್ರಮವಹಿಸುತ್ತಾ ಬಂದಿದೆ. ಜಿಲ್ಲೆಯ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜೂನ್ 12ರಂದು ಜಿಲ್ಲಾ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆಗೆ ಸಂಬಂಧಿಸಿದ ನಿರ್ದೇಶನ ನೀಡಲಾಗಿದೆ. ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿರುವ ಕುರಿತು ಫೋಟೋಗಳೊಂದಿಗೆ ಪೂರ್ಣ ವರದಿ ಅನ್ನು ಸರಕಾರದ ಸಂಬಂಧಿತ ಇಲಾಖೆಗೆ ಕಳುಹಿಸಲು ಸೂಚಿಸಲಾಗಿದೆ.
ಈ ಕಾರ್ಯಕ್ರಮದ ಮೂಲಕ ಮಕ್ಕಳಿಗೆ ಶಿಕ್ಷಣದ ಹಕ್ಕು, ಬಾಲ್ಯ ರಕ್ಷಣೆ ಹಾಗೂ ಮಕ್ಕಳ ಮೇಲೆ ಕಾರ್ಮಿಕ ಶೋಷಣೆಗೆ ತಡೆಗಟ್ಟುವ ಜಾಗೃತಿಯ ಉದ್ದೇಶ ಇದೆ.














