ಮನೆ ರಾಜ್ಯ ರಾಜ್ಯದಲ್ಲಿ 634 ಮಂದಿಗೆ ಕೋವಿಡ್ ಪಾಸಿಟಿವ್

ರಾಜ್ಯದಲ್ಲಿ 634 ಮಂದಿಗೆ ಕೋವಿಡ್ ಪಾಸಿಟಿವ್

0

ಬೆಂಗಳೂರು (Bengaluru):  ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 634 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,59,458ಕ್ಕೆ ಏರಿಕೆಯಾಗಿದೆ.‌

ಸೋಂಕಿನಿಂದ ಇಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 40070 ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

503 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,14,846ಕ್ಕೆ ಏರಿಕೆಯಾಗಿದೆ. ಇನ್ನು 4500 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರಿನಲ್ಲಿ ಇಂದು 610 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,94,738ಕ್ಕೆ ಏರಿಕೆಯಾಗಿದೆ.