ಮನೆ ರಾಜ್ಯ ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು: ಸಿದ್ದರಾಮಯ್ಯ

ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು: ಸಿದ್ದರಾಮಯ್ಯ

0

ಹುಬ್ಬಳ್ಳಿ (Hubbali): ವಿವಾದ ಸೃಷ್ಟಿಸುವಲ್ಲಿ ಬಿಜೆಪಿಗರು ನಿಸ್ಸೀಮರು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವುದು ಆರ್‌ಎಸ್‌ಎಸ್ ಪ್ರಾಯೋಜಿತ ಸರ್ಕಾರ ಹೀಗಾಗಿ ಅವರು ಪೊಲೀಸ್ ಠಾಣೆಗೂ ಮುತ್ತಿಗೆ ಹಾಕಿ ಗಲಾಟೆ ಮಾಡುತ್ತಾರೆ. ಅದೇ ಕಾಂಗ್ರೆಸ್ಸಿಗರು ಮಾಡಿದರೆ ಕೇಸ್ ಹಾಕಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಅಗ್ನಿಪಥ ಯೋಜನೆ ವಿರುದ್ಧ ಯುವಕರು ಆಕ್ರೋಶಗೊಂಡಿದ್ದಾರೆ. ಹಿಂದಿನ ಪದ್ದತಿಯನ್ನೇ ಮುಂದುವರಿಸಬೇಕು. ರಕ್ಷಣಾ ಇಲಾಖೆ ಸೇರಿ ಎಲ್ಲ ಇಲಾಖೆಗಳಲ್ಲಿ ಬಿಜೆಪಿ ಕೇಸರೀಕರಣ ಮಾಡಲು ಹೊರಟಿದೆ. ಆ ಮೂಲಕ ಅಶಾಂತಿ ಸೃಷ್ಟಿಸಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ವರ್ಚಸ್ಸಿಗೆ ಧಕ್ಕೆ ತರಲು, ಜಾರಿ ನಿರ್ದೇಶನಾಲಯ (ಇ.ಡಿ) ಮೂಲಕ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುವ ಅಗತ್ಯವಿಲ್ಲ. ಸುಳ್ಳು ಮೊಕದ್ದಮೆ ಹೂಡಿ ಕಾಂಗ್ರೆಸ್ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.