ಮೈಸೂರು : ಸಿಎಂ ಕುರ್ಚಿಗೆ ಯಾವುದೇ ಗಂಡಾಂತರ ಇಲ್ಲ. ೫ ವರ್ಷ ಸಿದ್ಧರಾಮಯ್ಯ ಅವರೆ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ಧರಾಮಯ್ಯ ಸ್ಪಷ್ಟಪಡಿಸಿದರು.
ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ಧರಾಮಯ್ಯ ಸಿಎಂ ಆಗಿ ಮುಂದುವರೆಯುತ್ತಾರೆ. ೫ ವರ್ಷ ಅವರೇ ಸಿಎಂ ಆಗಿ ಇರುತ್ತಾರೆ. ಹೈ ಕಮಾಂಡ್ ಯಾವುದೇ ಗಡುವು ನೀಡಿಲ್ಲ. ಇದರ ಬಗ್ಗೆ ಯಾವುದೇ ಚರ್ಚೆಯೂ ಆಗಿಲ್ಲ ಎಂದು ಹೇಳಿದರು. ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಖಂಡಿಸಿ ನಾಳೆ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರತಿಭಟನೆ ಮಾಡಲು ಬಿಜೆಪಿಯವರಿಗೆ ನೈತಿಕತೆ ಇಲ್ಲ. ಕುಂಭ ಮೇಳದಲ್ಲಿ ಕಾಲ್ತುಳಿತ ಆಯ್ತಲ್ಲ ಯಾರು ರಾಜಿನಾಮೆ ಕೊಟ್ರು.? ಈಗಾಗಲೇ ಪ್ರಕರಣ ಕುರಿತು ತನಿಖೆ ನಡೆಯುತ್ತಿದೆ. ಸರ್ಕಾರ ಏನು ಕ್ರಮ ಜರುಗಿಸಬೇಕು ಜರುಗಿಸಿದೆ. ಸುಖಾ ಸುಮ್ಮನೆ ಬಿಜೆಪಿ ಅವರು ಸುಳ್ಳು ಆರೋಪ ಮಾಡೋದು ಸರಿಯಲ್ಲ ಎಂದು ಹೇಳಿದರು.














