ಮನೆ ರಾಜ್ಯ ಅಹಮದಾಬಾದ್ ವಿಮಾನ ದುರಂತ: ನಿಖಿಲ್ ಕುಮಾರಸ್ವಾಮಿ ಸಂತಾಪ

ಅಹಮದಾಬಾದ್ ವಿಮಾನ ದುರಂತ: ನಿಖಿಲ್ ಕುಮಾರಸ್ವಾಮಿ ಸಂತಾಪ

0

ಬೆಂಗಳೂರು: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಪತನ ದುರಂತದ ಬಗ್ಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಘಾತ ವ್ಯಕ್ತಪಡಿಸಿ ಸಂತಾಪ ಸೂಚಿಸಿದ್ದಾರೆ.

242 ಪ್ರಯಾಣಿಕರೊಂದಿಗೆ ಲಂಡನ್‌ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ನಂತರ ತಾಂತ್ರಿಕ ದೋಷದಿಂದಾಗಿ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಮೇಘಾನಿ ಪ್ರದೇಶದಲ್ಲಿ ಪತನಗೊಂಡಿದೆ. ಈ ಘಟನೆಗೆ ಸಂಬಂಧಿಸಿದಂತೆ ನಿಖಿಲ್ ಅವರು ತಮ್ಮ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ, “ಈ ದುರ್ಘಟನೆ ಸುದ್ದಿಯನ್ನು ಕೇಳಿ ಬಹಳ ದುಃಖವಾಗಿದೆ. ಸಾವಿಗೀಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ” ಎಂದು ಹೇಳಿದ್ದಾರೆ.

242 ಪ್ರಯಾಣಿಕರನ್ನು ಹೊತ್ತ ಏರ್ ಇಂಡಿಯಾ ವಿಮಾನವು ತಾಂತ್ರಿಕ ದೋಷದಿಂದಾಗಿ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಜನವಸತಿ ಪ್ರದೇಶದ ಮೆಡಿಕಲ್ ಕಾಲೇಜು ಬಳಿ ಭೀಕರವಾಗಿ ಪತನಗೊಂಡಿದೆ. ಪತನದ ತಕ್ಷಣದ ಬಳಿಕ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಜನವಸತಿ ಪ್ರದೇಶದ ಕಟ್ಟಡಗಳಿಗೂ ವಿಮಾನ ಬಡಿದ ಪರಿಣಾಮ ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ: 30 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದಾರೆ. 40ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ 7 ಅಗ್ನಿಶಾಮಕ ದಳಗಳು ಹಾಗೂ ಎನ್‌ಡಿಆರ್‌ಎಫ್ ತಂಡಗಳು ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ರಕ್ಷಣಾ ತಂಡಗಳು ಅವಶೇಷಗಳಲ್ಲಿ ಸಿಲುಕಿದವರನ್ನು ಹೊರತೆಗೆಯುವಲ್ಲಿ ತೊಡಗಿಕೊಂಡಿವೆ.