ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ದುರಂತವಾಗಿ ಸಾವಿಗೀಡಾಗಿರುವ ಸುದ್ದಿ ದೇಶದಾದ್ಯಂತ ಆಘಾತ ಮೂಡಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಇಂದು ಅವರ ಕುಟುಂಬಸ್ಥರನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.
ಗುರುವಾರ ಅಹಮದಾಬಾದ್‌ನಲ್ಲಿಯ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ 241 ವ್ಯಕ್ತಿಗಳಲ್ಲಿ ಒಬ್ಬರಾದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಕುಟುಂಬವನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಭೇಟಿ ಮಾಡಿದರು.
“ವಿಜಯ್‌ಭಾಯ್ ನಮ್ಮ ನಡುವಿಲ್ಲ ಎಂಬುದು ನಂಬಲಾರದ ವಿಷಯ. ನಾನು ಅವರಿಗೆ ದಶಕಗಳಿಂದ ಪರಿಚಿತನಾಗಿದ್ದೆ. ನಾವು ಹಲವಾರು ಸವಾಲಿನ ಕ್ಷಣಗಳಲ್ಲಿ ಒಟ್ಟಾಗಿ ಕೆಲಸ ಮಾಡಿದ್ದೇವೆ. ವಿಜಯ್‌ಭಾಯ್ ವಿನಮ್ರ ಮತ್ತು ಕಠಿಣ ಪರಿಶ್ರಮಿಯಾಗಿದ್ದರು, ಪಕ್ಷದ ಸಿದ್ಧಾಂತಕ್ಕೆ ದೃಢವಾಗಿ ಬದ್ಧರಾಗಿದ್ದರು. ಹುದ್ದೆಗಳಲ್ಲಿ ಮೇಲೇರಿ, ಅವರು ಸಂಘಟನೆಯಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದರು ಮತ್ತು ಗುಜರಾತ್‌ನ ಮುಖ್ಯಮಂತ್ರಿಯಾಗಿ ಶ್ರದ್ಧೆಯಿಂದ ಸೇವೆ ಸಲ್ಲಿಸಿದರು” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.














