ಮೈಸೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗೆ ಮುನ್ನುಡಿ ಬೀಳುವ ಸಾಧ್ಯತೆ ಇದ್ದು, ನವೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಸ್ಪಷ್ಟವಾಗಿ ಹೇಳಿದ್ದಾರೆ. ಸದ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರು ಬದಲಿ ಆಗುವ ಸಾಧ್ಯತೆಯಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್. ವಿಶ್ವನಾಥ್, “ನವೆಂಬರ್ನಲ್ಲಿ ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಲ್ಲಿರುವುದಿಲ್ಲ. ಅದು ಸ್ಪಷ್ಟವಾಗಿದೆ. ಮುಂದಿನ ಮುಖ್ಯಮಂತ್ರಿಯಾಗಿ ಡಿಕೆಶಿ ಅಥವಾ ಖರ್ಗೆ ಅವರ ಪೈಕಿ ಒಬ್ಬರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಬಹಳವಿದೆ” ಎಂದು ಹೇಳಿದ್ದಾರೆ.














