ಮನೆ ರಾಜ್ಯ ಕಾಲ್ತುಳಿತ ಕೇಸ್ : ಸಿಎಂ ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಕಾಲ್ತುಳಿತ ಕೇಸ್ : ಸಿಎಂ ಡಿಸಿಎಂ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

0

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಇಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರಾದ ಗೋವಿಂದ ಕಾರಜೋಳ, ಶಾಸಕರಾದ ಕೆ.ಗೋಪಾಲಯ್ಯ, ಸಿಮೆಂಟ್ ಮಂಜುನಾಥ್, ಭೈರತಿ ಬಸವರಾಜು, ಸಿ.ಕೆ. ರಾಮಮೂರ್ತಿ, ಎಂಎಲ್ ಸಿ ಗಳಾದ ಭಾರತಿ ಶೆಟ್ಟಿ, ರವಿಕುಮಾರ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.