ಮಂಡ್ಯ: ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ, ಕಲ್ಯಾಣ ಮತ್ತು ಸೆಸ್ ಆಯುಕ್ತರ ಕಛೇರಿ ಮತ್ತು ಕಾರ್ಮಿಕ ಕಲ್ಯಾಣ ಸಂಸ್ಥೆ ವತಿಯಿಂದ 2025-26 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿ ಮತ್ತು ಅದಕ್ಕಿಂತ ಹೆಚ್ಚಿನ ವ್ಯಾಸಂಗ ಮಾಡುತ್ತಿರುವ ಬೀಡಿ, ಸಿನಿ ಕಾರ್ಮಿಕರು, ಸುಣ್ಣದಕಲ್ಲು ಮತ್ತು ಡೊಲೊಮೈಟ್ ಗಣಿ ಕಾರ್ಮಿಕರ ಮಕ್ಕಳಿಗೆ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲು ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು scholarships.gov.in ವೆಬ್ಸೈಟ್ನಲ್ಲಿ ಸಲ್ಲಿಸಬೇಕಾಗಿದೆ.
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 31 ಕೊನೆಯ ದಿನಾಂಕವಾಗಿದ್ದು, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನಾಂಕವಾಗಿರುತ್ತದೆ.
ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಲು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು ತಮ್ಮ ಶಾಲೆ ಮತ್ತು ಕಾಲೇಜನ್ನು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ scholarships.gov.in ನಲ್ಲಿ ನೋಂದಾಯಿಸಿಕೊಳ್ಳಬೇಕಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ. ಸಂ : 080-23471406 / 080-22347749 ಅನ್ನು ಸಂಪರ್ಕಿಸಲು ಬೆಂಗಳೂರು ಕಲ್ಯಾಣ ಮತ್ತು ಸೆಸ್ ಆಯುಕ್ತರು ಹಾಗೂ ಉಪ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














