ಮನೆ ಅಪರಾಧ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ಹೋಗಿ ಮಹಿಳೆ ನೀರುಪಾಲು

ಕೃಷ್ಣ ನದಿಗೆ ಬಾಗಿನ ಅರ್ಪಿಸಲು ಹೋಗಿ ಮಹಿಳೆ ನೀರುಪಾಲು

0

ಬೆಳಗಾವಿ : ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಇದೀಗ ಅಪಾಯ ಮಟ್ಟ ಮೀರಿ ಉಕ್ಕಿ ಹರಿಯುತ್ತಿದ್ದ ಕೃಷ್ಣ ನದಿಗೆ ಬಾಗಿನ ಅರ್ಪಿಸಲು ತೆರಳಿದ್ದ ಮಹಿಳೆಯೊಬ್ಬರು ನೀರು ಪಾಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಮಾಂಜರಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಮಾಂಜರಿ ಗ್ರಾಮದ ಸಂಗೀತಾ ಶಿವಾಜಿ ಮಾಂಜರೇಕರ್ (40) ಎಂದು ಗುರುತಿಸಲಾಗಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು ಹಿನ್ನಲೆ ಕೃಷ್ಣಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆ ನದಿಗೆ ಬಾಗಿನ ಅರ್ಪಿಸಲು ಸಂಗೀತಾ ತೆರಳಿದ್ದಾರೆ. 

ನದಿಗೆ ಬಾಗಿನ ಅರ್ಪಿಸುವ ವೇಳೆ ಕಾಲು ಜಾರಿ ನದಿಗೆ ಬಿದ್ದಿದ್ದು, ನೀರು ರಭಸವಾಗಿ ಹರಿತ್ತಿದ್ದ ಪರಿಣಾಮ ಕೊಚ್ಚಿಕೊಂಡು ಹೋಗಿದ್ದಾರೆ. ಸದ್ಯ ಅಂಕಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.