ಮನೆ ಕಾನೂನು ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಶಾಸಕರ ಅನರ್ಹತೆ ಆದೇಶ ವಾಪಸ್

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಶಾಸಕರ ಅನರ್ಹತೆ ಆದೇಶ ವಾಪಸ್

0

ಬೆಂಗಳೂರು : ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಶಾಸಕತ್ವ ಅನರ್ಹ ಆದೇಶ ವಾಪಸ್ ಪಡೆಯಲಾಗಿದೆ.

ಹೈದ್ರಾಬಾದ್ ಸಿಬಿಐ ಕೋರ್ಟ್ ಗಾಲಿ ಜನಾರ್ದನ ರೆಡ್ಡಿ ಅವರ ವಿರುದ್ಧ ನೀಡಿದ್ದ ತೀರ್ಪಿಗೆ ತೆಲಂಗಾಣ ಹೈಕೋರ್ಟ್ ಜೂ.11 ರಂದು ತಾತ್ಕಾಲಿಕ ತಡೆ ನೀಡಿ ಜಾಮೀನು ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ವಿಧಾನಸಭಾ ಸಚಿವಾಲಯದ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಮೇ.06 ರಂದು ತಾವು ಹೊರಡಿಸಿದ್ದ ಅನರ್ಹ ಆದೇಶ ನ್ಯಾಯಾಲಯದ ಮುಂದಿನ ಆದೇಶದ ವರೆಗೆ ವಾಪಸ್ ಪಡೆದು ಸುತ್ತೋಲೆ ಹೊರಡಿಸಿದ್ದಾರೆ.

ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಈ ಬಗ್ಗೆ ಆದೇಶ ಹೊರಡಿಸಿದ್ದು, ಮೇ 6 ರಿಂದ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬರುವವರೆಗೆ ಅಥವಾ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರುತ್ತದೆ. ನಿಯಮದ ಪ್ರಕಾರ ಯಾವುದೇ ಶಾಸಕ ಅಥವಾ ಸಂಸದ ಎರಡು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಅವರ ಸ್ಥಾನ ರದ್ದಾಗುತ್ತದೆ.