ಚಾಮರಾಜನಗರ(Chamarajanagar): ಕೇಂದ್ರ ಸರ್ಕಾರ, ಇ.ಡಿ ವಿರುದ್ಧ ಶುಕ್ರವಾರ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ನ ಮುಖಂಡರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ನಗರ ಬ್ಲಾಕ್ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಕಾಂಗ್ರೆಸ್ ಜಿಲ್ಲಾ ವಕ್ತಾರ ಕೆರೆಹಳ್ಳಿ ನವೀನ್ ಸೇರಿದಂತೆ ಆರು ಮಂದಿ ವಿರುದ್ಧ ಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಪ್ರತಿಭಟನೆಗೆ ಅನುಮತಿ ನೀಡದಿದ್ದರೂ, ಗುಂಪುಗೂಡಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.