ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್‌ನಲ್ಲಿ ನುಗ್ಗಲು ಪ್ರಯತ್ನಿಸಿದ ಜಮ್ಮು ಮತ್ತು ಕಾಶ್ಮೀರದ ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ವರದಿಗಳ ಪ್ರಕಾರ ವ್ಯಕ್ತಿ ಪಾಸ್ ಪೋರ್ಟ್ ಇಲ್ಲದೆ ಏಕಾಏಕಿ ಟರ್ಮಿನಲ್ ಗೆ ನುಗ್ಗಿದ್ದಾನೆ. ಆತನನ್ನು ಸದಾದ್ ಮಹಮ್ಮದ್ ಬಾಬಾ ಎಂದು ಗುರುತಿಸಲಾಗಿದೆ. ವ್ಯಕ್ತಿ ಜಮ್ಮು ಮತ್ತು ಕಾಶ್ಮೀರ ಮೂಲದವನು ಎಂದು ತಿಳಿದು ಬಂದಿದೆ.
ಸದ್ಯ ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆತ ವಿಧ್ವಂಸಕರ ಕೃತ್ಯದ ಗುರಿ ಹೊಂದಿದ್ದನೇ ಎಂಬುದರ ಬಗ್ಗೆ ಸೇರಿದಂತೆ ಹಲವು ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ.














