ಮಂಡ್ಯ : ಕಾವೇರಿ ಕೊಳ್ಳದ ಪ್ರದೇಶದಲ್ಲಿ ವಿಪರೀತ ಮಳೆಯಾಗುತ್ತಿದ್ದು ಕನ್ನಂಬಾಡಿ ತುಂಬಿ ತುಳುಕುತ್ತಿದೆ. ಇನ್ನೇನು ಕೆಲವೇ ದಿನಗಳಲ್ಲಿ KRS ಭರ್ತಿಯಾಗುತ್ತದೆ.
ಈ ನಡುವೆ KRS ಜಲಾಶಯದಿಂದ ನೀರು ಹೊರಬಿಡಲಾಗಿದ್ದು, ಕಾವೇರಿ ನದಿ ಪಾತ್ರದ ಜನರಿಗೆ ಎಚ್ಚರಿಕೆ ಸಂದೇಶ ರವಾನೆ ಮಾಡಲಾಗಿದೆ. ನದಿ ಪಾತ್ರದ ಬಳಿ ತೆರಳದಂತೆ ಜನರಿಗೆ ನೀರಾವರಿ ಇಲಾಖೆ ಯಿಂದ ಎಚ್ಚರಿಕೆ ನೀಡಲಾಗಿದ್ದು,ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್‍ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.ಆಯಕಟ್ಟಿನ ಸ್ಥಳದಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ. ನಿಯಮಗಳನ್ನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ.














