ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಜುಲೈ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದ ಮೂರ್ತಿ ಹೇಳಿದರು.
ಇಂದು (ಜೂ.25) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಜುಲೈ ಮಾಹೆಯಲ್ಲಿ ಬರುವ ಮಹನೀಯರ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜುಲೈ 2 ರಂದು ಫ.ಗು ಹಳಕಟ್ಟಿಯವರ ಜನ್ಮದಿನವನ್ನು ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನಾಗಿ ಹಾಗೂ ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ವ್ಯವಸ್ಥಿತವಾಗಿ ಆಚರಿಸಲಾಗುವುದು ಎಂದು ಹೇಳಿದರು.
ಜುಲೈ 2 ರಂದು ನಡೆಯುವ ಫ.ಗು ಹಳಕಟ್ಟಿಯವರ ಜನ್ಮದಿನವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗುವುದು ಎಂದರು.
ಜುಲೈ 10 ರಂದು ಹಡಪದ ಅಪ್ಪಣ್ಣ ಜಯಂತಿಯನ್ನು ವ್ಯವಸ್ಥಿತವಾಗಿ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗುವುದು, ಹಾಗೂ ಸಮುದಾಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಹಾಗೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಿಸಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಹಡಪದ ಅಪ್ಪಣ್ಣ ಜಯಂತಿಯAದು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮಾಹಿತಿ ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ನಂದೀಶ್, ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಡಾ. ಕೆ.ಪಿ ಅಶ್ವಥ್, ಅಮ್ಜದ್ ಪಾಷಾ, ರಾಜಣ್ಣ ಸೇರಿದಂತೆ ಇನ್ನಿತರ ಮುಖಂಡರುಗಳು ಉಪಸ್ಥಿತರಿದ್ದರು.














