ಮನೆ ರಾಜ್ಯ ರಾಜ್ಯದಲ್ಲಿ 750 ಮಂದಿಗೆ ಕೋವಿಡ್‌ ಪಾಸಿಟಿವ್‌

ರಾಜ್ಯದಲ್ಲಿ 750 ಮಂದಿಗೆ ಕೋವಿಡ್‌ ಪಾಸಿಟಿವ್‌

0

ಬೆಂಗಳೂರು (Bengaluru): ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 750 ಕೋವಿಡ್‌ ಪಾಸಿಟಿವ್‌ ವರದಿ ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರದಲ್ಲಿ 716 ಕೇಸ್‍ಗಳು ದಾಖಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 39,60,208ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ.

ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ರಾಜ್ಯದಲ್ಲಿ ಈವರೆಗೆ ಒಟ್ಟು 40,070 ಮರಣ ಪ್ರಕರಣ ವರದಿಯಾಗಿದೆ. 425 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದ ಗುಣಮುಖರ ಸಂಖ್ಯೆ 39,15,271ಕ್ಕೆ ಏರಿಕೆಯಾಗಿದೆ. 4,825 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ ಇಂದು ಒಟ್ಟು 716 ಕೇಸ್ ಪತ್ತೆಯಾಗುವುದರೊಂದಿಗೆ ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 4,653ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು ಒಟ್ಟು 57,152 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 24,469 ಸ್ಯಾಂಪಲ್ (ಆರ್‌ಟಿಪಿಸಿಆರ್ 18,146 + 6,323 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.