ಮನೆ ಕಾನೂನು ವಕ್ಫ್‌ ಬಗ್ಗೆ ಪ್ರಚೋದನಕಾರಿ ಹೇಳಿಕೆ : ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ರದ್ದು

ವಕ್ಫ್‌ ಬಗ್ಗೆ ಪ್ರಚೋದನಕಾರಿ ಹೇಳಿಕೆ : ಬಸವರಾಜ ಬೊಮ್ಮಾಯಿ ವಿರುದ್ದ ಪ್ರಕರಣ ರದ್ದು

0

ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಬಿಗ್‌ರಿಲೀಫ್‌ ಸಿಕ್ಕಿದೆ. ವಕ್ಫ್‌ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಬಸವರಾಜ ಬೊಮ್ಮಾಯಿ ವಿರುದ್ದ ದಾಖಲಾಗಿದ್ದ ಎರಡು ಪ್ರಕರಣಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

ಶಿಗ್ಗಾಂವಿಯಲ್ಲಿ ಮಾಜಿ ಸಿಎಂ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ವಕ್ಫ್‌ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ದ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು. ಶಿಗ್ಗಾವಿ ಮತ್ತು ಸವಣೂರು ಠಾಣೆಯಲ್ಲಿ ಪ್ರತ್ಯೇಕ ದೂರುಗಳು ದಾಖಲಾಗಿತ್ತು.

ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್‌ ಏಕಸದಸ್ಯ ಪೀಠವು ಪ್ರಕರಣವನ್ನು ರದ್ದುಪಡಿಸಿದೆ.