ಮಂಡ್ಯ: ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿಗೆ ಸ್ವಯಂ-ಉದ್ಯೋಗ ಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ ಅಥವಾ ವಾಹಿನಿ ಯೋಜನೆ , ವಾಸವಿ ಜಲಶಕ್ತಿ ಯೋಜನೆ ಮತ್ತು ಅರಿವು ಶೈಕ್ಷಣಿಕ ಸಾಲ ಯೋಜನೆಯನ್ನು ಅನುಷ್ಟಾನಗೊಳಿಸಲಾಗುತ್ತಿದೆ. ಈ ಯೋಜನೆಗಳಡಿ ಸೌಲಭ್ಯವನ್ನು ಪಡೆಯಲು ಇಚ್ಚಿಸುವ ಆರ್ಯ ವೈಶ್ಯ ಸಮುದಾಯದವರು kacdc.karnataka.gov.in ವೆಬ್ ಸೈಟ್ ನಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು. ಆಯ್ಕೆಯಾದ ಮಹಿಳೆಯರಿಗೆ ಶೇ.33%, ವಿಶೇಷಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗರÀವರಿಗೆ ಶೇ.5% ಮೀಸಲಾತಿ ಇರಿಸಲಾಗಿದೆ. ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ರೂ.3,00,000/-ಗಳ ಮಿತಿಯೊಳಗಿರಬೇಕು ಹಾಗೂ 18 ರಿಂದ 55 ವರ್ಷದ ವಯೋಮಿತಿಯವರು ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ: ಸಂ 94484 51111 / 08232-231804 ಹಾಗೂ kacdc.karnataka.gov.in ವೆಬ್ ಸೈಟ್ ಅನ್ನು ಸಂಪರ್ಕಿಸಬಹುದಾದೆ ಎಂದು ಕೆ.ಎ.ಸಿ.ಡಿ.ಸಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














