ಮೈಸೂರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಕಲಾ ತರಬೇತಿ ಶಿಬಿರವನ್ನು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ಪೂರ್ವ ಮತ್ತು ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ನಡೆಯುತ್ತಿದೆ . ತರಬೇತಿಯು ಆರು ತಿಂಗಳ ಅವಧಿಯಾಗಿದ್ದರೆ , ಶಿಬಿರದಲ್ಲಿ ಜಾನಪದ / ನೃತ್ಯ / ಸುಗಮ ಸಂಗೀತ / ಶಾಸ್ತ್ರೀಯ ಸಂಗೀತ / ಹಿ o ದೂಸ್ಥಾನಿ ಸಂಗೀತ / ವಾದ್ಯ ಸಂಗೀತ ತರಬೇತಿಯನ್ನು ನೀಡಲು ಹಿರಿಯ / ಪರಿಣಿತ ಗುರುಗಳು / ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ .
ಆಸಕ್ತ ಅಭ್ಯರ್ಥಿಗಳ ಅರ್ಜಿಗಳನ್ನು ಸ್ವ – ವಿವರಗಳೊಂದಿಗೆ ಜುಲೈ 15 ರ ಸಂಜೆ 5.30 ರೊಳಗೆ ಕರ್ನಾಟಕ ಕಲಾಮಂದಿರದಲ್ಲಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು .
ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಚೇರಿ ದೂ . ಸಂ :0821-2513225 ಅನ್ನು ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಡಾ . ಎಂ . ಡಿ . ಸುದರ್ಶನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ














