ಮನೆ ರಾಜ್ಯ ಪ್ರಧಾನಿ ಅವರಿಂದ ಮೆದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆ

ಪ್ರಧಾನಿ ಅವರಿಂದ ಮೆದುಳು ಸಂಶೋಧನಾ ಕೇಂದ್ರ ಲೋಕಾರ್ಪಣೆ

0

ಬೆಂಗಳೂರು(Bengaluru): ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಿಸಿರುವ  ಮೆದುಳು ಸಂಶೋಧನಾ ಕೇಂದ್ರವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಲೋಕಾರ್ಪಣೆಗೊಳಿಸಿದರು.

ಇದೇ ವೇಳೆ 425 ಕೋಟಿ ರೂ. ವೆಚ್ಚದಲ್ಲಿ ಐಐಎಸ್ಸಿ ಆವರಣದಲ್ಲಿ ನಿರ್ಮಾಣ ವಾಗಲಿರುವ ಬಾಗ್ಚಿ- ಪಾರ್ಥಸಾರಥಿ ಆಸ್ಪತ್ರೆಗೂ ಪ್ರಧಾನಿಯವರು ಶಂಕುಸ್ಥಾಪನೆ ನೆರವೇರಿಸಿದರು.

ರಾಜ್ಯಪಾಲ ಥಾವರ್ ಚಂದ್  ಗೆಹ್ಲೋಟ್, ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ದಾನಿಗಳಾದ ಕ್ರಿಸ್ ಗೋಪಾಲಕೃಷ್ಣನ್ ದಂಪತಿ ಹಾಗೂ ಬಾಗ್ಚಿ ಮತ್ತು ಪಾರ್ಥಸಾರಥಿ ಕುಟುಂಬದವರು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.