ಮನೆ ಅಪರಾಧ ಮಂಗಳೂರು ಡ್ರಗ್ಸ್ ಜಾಲದಲ್ಲಿ ವೈದ್ಯನ ಬಂಧನ: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

ಮಂಗಳೂರು ಡ್ರಗ್ಸ್ ಜಾಲದಲ್ಲಿ ವೈದ್ಯನ ಬಂಧನ: ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

0

ಮಂಗಳೂರು : ಇತ್ತೀಚೆಗೆ ದಕ್ಷಿಣ ಕನ್ನಡದಲ್ಲಿ ಡ್ರಗ್ಸ್ ಮಾರಾಟ ದಂಧೆ ಹೆಚ್ಚಾಗಿದೆ. ಇದೀಗ ಇದರ ನಿರ್ಮೂಲನೆಗೆ ಪೊಲೀಸರು ದಿಟ್ಟ ಹೆಜ್ಜೆ ಇಟ್ಟಿದ್ದು. ವಿದ್ಯಾರ್ಥಿಗಳಿಗೆ ಕದ್ದು ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ವೈದ್ಯನನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಬಂಧಿತ ಆರೋಪಿಯನ್ನು ಬೀದರ್ ಮೂಲದ ವೈದ್ಯ ಪ್ರಜ್ವಲ್ ಪಿಣ್ಯಾಸ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಪ್ರಸ್ತುತ ಬೆಂಗಳೂರಿನ ಕೋಡಿಪಾಳ್ಯ ನಿವಾಸಿಯಾಗಿದ್ದು, ಈತ ಹಾಗೂ ಈತನ ಸಹಚರರು ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಮಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿಗಳನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಮಂಗಳೂರಿಗೆ ಬಂದ ಡ್ರಗ್ಸ್ ಗಳನ್ನು ಕದ್ದು ಮುಚ್ಚಿ ಹಂಚುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ 6 ಜನ  ಆರೋಪಿಗಳನ್ನು ಬಂದಿಸಿದ್ದರು.

ಇದೀಗ ಬಂಧಿತರನ್ನು ವಿಚಾರಣೆ ನಡೆಸಿದಾಗ ಸ್ಫೋಟಕ ವಿಷಯ ಬೆಳಕಿಗೆ ಬಂದಿದ್ದು, ಈ ಹಿಂದೆ ವೈದ್ಯ ಪ್ರಜ್ವಲ್ ಪಿಣ್ಯಾಸ್ ಮಂಗಳೂರಿನ ಫಾದರ್ ಮುಲ್ಲರ್ಸ್ ಕಾಲೇಜಿನಲ್ಲಿ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ.. ಆಗಲು ಕೂಡ ಡ್ರಗ್ಸ್ ಸೇರಿದಂತೆ ಇನ್ನಿತರ ಚಟುವಟಿಕೆಯಲ್ಲಿ ಭಾಗಿಯಾಗಿ ಮೂರು ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ದೂರು ದಾಖಲಾಗಿತ್ತು.

ಇದೀಗ ಆರೋಪಿಗಳ ಹೇಳಿಕೆಯ ಪ್ರಕಾರ ಪ್ರಜ್ವಲ್ ನ ಜಾಡು ಹಿಡಿದು ಹೊರಟ ಪೊಲೀಸರು ಆರೋಪಿ ವೈದ್ಯನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.