ಪಿರಿಯಾಪಟ್ಟಣ: ಮಹಿಳಾ ಸಬಲೀಕರಣದ ಜೊತೆಜೊತೆಗೆ ಕಾಂಗ್ರೆಸ್ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ದಿಯನ್ನು ಗುರಿಯನ್ನಾಗಿಟ್ಟುಕೊಂಡು ಪಂಚ ಗ್ಯಾರಂಟಿಗಳಿಗಳನ್ನು ಜಾರಿಗೊಳಿಸಿದೆ ಎಂದು ತಾಲ್ಲೂಕು ಗ್ಯಾರೆಂಟಿ ಅನಿಷ್ಠಾನ ಸಮಿತಿ ಅಧ್ಯಕ್ಷ ನಿತೀನ್ ವೆಂಕಟೇಶ್ ತಿಳಿಸಿದರು.
ಪಟ್ಟಣದ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಪ್ರಯಾಣಿಸಿದ ಸಂಭ್ರಮದ ಅಂಗವಾಗಿ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಲಾಗಿತ್ತು. 2023ರ ಮೇ 20 ರಂದು ಸರ್ಕಾರ ಅಸ್ತಿತ್ವಕ್ಕೆ ಬಂದ ತಕ್ಷಣ ಜಾರಿಗೊಳಿಸಲು ಸಚಿವ ಸಂಪುಟದಲ್ಲಿ ಕೈಗೊಂಡ ತೀರ್ಮಾನದಂತೆ ಜೂನ್ 11 ರಂದು ಶಕ್ತಿ ಯೋಜನೆಗೆ ಚಾಲನೆ ನೀಡಲಾಯಿತು. ಮಹಿಳಾ ಸಬಲೀಕರಣವನ್ನು ಗುರಿಯನ್ನಾಗಿಟ್ಟುಕೊಂಡು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಕ್ತಿ ಯೋಜನೆಯನ್ನು ರೂಪಿಸಿ ಆ ಮೂಲಕ ರಾಜ್ಯದಾಧ್ಯಂತ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದು, ಈ ಯೋಜನೆ ಇಂದು 500 ಕೋಟಿ ಮಹಿಳೆಯರು ಪ್ರಯಾಣ ಬೆಳೆಸಿದ ಸವಿನೆನಪಿಗಾಗಿ ರಾಕ್ಯದಾದ್ಯಂತ ಸಂಭ್ರಮಾಚರಣೆ ನಡೆಯುತ್ತಿದೆ. ಆರಂಭದಲ್ಲಿ ವಿರೋಧ ಪಕ್ಷಗಳು ಈ ಯೋಜನೆಗಳಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆ, ಅಭಿವೃದ್ಧಿ ಹಿನ್ನೆಡೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ 14 ಬಾರಿ ಬಜೆಟ್ ಮಂಡನೆ ಮಾಡಿದ ಹೆಗ್ಗಳಿಗಕೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬ ಹಣಕಾಸು ತಜ್ಞರಾಗಿ ಎಲ್ಲವನ್ನು ಸರಿದೂಗಸಿ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಎರಡನ್ನೂ ಸಮಾನವಾಗಿ ತೆಗೆದುಕೊಂಡು ಹೋಗುವ ಬದ್ದತೆ, ಜಾಣ್ಮೆ ತೋರಿದ್ದಾರೆ. ಈ ಹಿಂದೆ ಅನ್ನಭಾಗ್ಯ ಯೋಜನೆಯ ಬಗ್ಗೆ ಟೀಕೆ ಕೇಳಿಬಂದಿತ್ತು. ಆದರೆ ಕೊರೊನಾ ಸಂದರ್ಭದಲ್ಲಿ ಈ ಯೋಜನೆಯೇ ಬಡವರಿಗೆ ನೆರವಾಯಿತು. ಅದೇ ರೀತಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ನೀಡಿದ ಐದು ಗ್ಯಾರಂಟಿಗಳಲ್ಲಿ ಮಹಿಳಾ ಸಬಲೀಕರಣದ ಶಕ್ತಿ ಯೋಜನೆ ಅತ್ಯಂತ ಯಶಸ್ವಿಯಾಗಿರುವುದೇ ಇಂದು 500 ಮಹಿಳೆಯರ ಉಚಿತ.ಪಯಣವೇ ಸಾಕ್ಷಿಯಾಗಿದೆ ಎಂದರರು.
ಈ ಸಂದರ್ಭದಲ್ಲಿ ಡಿಪೋ ಮ್ಯಾನೇಜರ್ ದರ್ಶನ್ ರಾಮಚಂದ್ರ, ಪುರಸಭಾ ಅಧ್ಯಕ್ಷ ಪ್ರಕಾಶ್ ಸಿಂಗ್, ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಸಮಿತಿ ಸದಸ್ಯ ಬೆಟ್ಟದಪುರ ರವಿ, ಹಬಟೂರು ರಘು, ಪುರಸಭಾ ಸದಸ್ಯ ಪಿ.ಸಿ.ಕೃಷ್ಣ, ಸಾರಿಗೆ ಇಲಾಖಾ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.














