ಮನೆ ರಾಜ್ಯ ಸರೋಜಾ ದೇವಿ ನಿಧನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ

ಸರೋಜಾ ದೇವಿ ನಿಧನ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಂತಾಪ

0

ಬೆಂಗಳೂರು: ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಬಿ ಸರೋಜಾ ದೇವಿ ಅವರು ನಿನ್ನೆ (ಜುಲೈ 14) ನಿಧನ ಹೊಂದಿದ್ದು, ಚಿತ್ರರಂಗದ ಗಣ್ಯರು, ರಾಜಕಾರಣಿಗಳು ನಟಿಯ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಇಂದು (ಜುಲೈ 15) ಬಿ ಸರೋಜಾ ದೇವಿ ಅವರ ಅಂತಿಮ ಕಾರ್ಯ ನಡೆಯಲಿದ್ದು, ಹಲವಾರು ಮಂದಿ ಗಣ್ಯರು, ಕುಟುಂಬದವರು ಕಾರ್ಯದಲ್ಲಿ ಭಾಗಿ ಆಗಲಿದ್ದಾರೆ. ಹಲವಾರು ಮಂದಿ ಸಚಿವರುಗಳು, ರಾಜಕಾರಣಿಗಳು ಬಿ ಸರೋಜಾ ದೇವಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಟ್ವೀಟ್ ಮಾಡಿ, ‘ಕನ್ನಡದ ಹಿರಿಯ ನಟಿ, ಪಂಚ ಭಾಷೆಗಳಲ್ಲಿ ಸುಮಾರು 6 ದಶಕಗಳ ಕಾಲ ಚಿತ್ರರಂಗದಲ್ಲಿ ಸೇವೆ ಮಾಡಿರುವ, ಅಭಿನಯ ಸರಸ್ವತಿ ಎಂದೇ ಖ್ಯಾತರಾಗಿದ್ದ ಬಿ. ಸರೋಜಾ ದೇವಿ ಅವರ ನಿಧನದ ಸುದ್ದಿ ನಿಜಕ್ಕೂ ಆಘಾತ ತಂದಿದೆ‌. ಇವರು ಪಂಚ ಭಾಷೆಗಳಲ್ಲಿ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಚಿತ್ರರಂಗದಲ್ಲಿನ ಸಾಧನೆಗೆ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಪುರಸ್ಕರಿಸಿತ್ತು. ಅಗಲಿದ ಅವರ ಆತ್ಮಕ್ಕೆ ದೇವರು ಶಾಂತಿ ಸಿಗಲೆಂದು ಹಾಗೂ ಅಪಾರ ಅಭಿಮಾನಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.