ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಿದರೆ ನಾವು ಹೊಸ ಪಕ್ಷವನ್ನು ಕಟ್ಟುತ್ತೇವೆ’ ಎಂದು ಬಿಜೆಪಿಯಿಂದ ಉಚ್ಚಾಟಿತರಾಗಿದ್ದಾರೆ ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಎಚ್ಚರಿಕೆ ನೀಡಿದ್ದಾರೆ. ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು, ನಾವು ಹೊಸ ಪಕ್ಷ ಕಟ್ಟುವ ಬಗ್ಗೆ ಸಂಶಯ ಬೇಡ. ಹಿಂದುತ್ವ ಮತ್ತು ಅಭಿವೃದ್ಧಿ ಆಧಾರದ ಮೇಲೆ ಹೊಸ ಪಕ್ಷ ಕಟ್ಟುತ್ತೇವೆ. ನಮ್ಮ ಪಕ್ಷಕ್ಕೆ ಕಾಂಗ್ರೆಸ್, ಬಿಜೆಪಿ ಎರಡೂ ಪಕ್ಷಗಳಿಂದ ಬರುತ್ತಾರೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ನಾವು ಆಡಳಿತ ಮಾಡಲಿದ್ದೇವೆ ಎಂದರು.
ಶಿವಮೊಗ್ಗದಲ್ಲಿ ಸಿಗಂದೂರು ಸೇತುವೆ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರಬೇಡಿ ಎಂದು ಹೇಳಿದ್ದೇ ಯಡಿಯೂರಪ್ಪ. `ನೀವು, ನಿಮ್ಮ ಸಚಿವರೂ ಬರುವುದು ಬೇಡ’ ಎಂದು ಸಿದ್ದರಾಮಯ್ಯಗೆ ಹೇಳಿದ್ದರು. ಏಕೆಂದರೆ ಕೇಂದ್ರದ ಬಿಜೆಪಿ ವರಿಷ್ಠರಿಗೆ ಸಂದೇಶ ರವಾನೆ ಮಾಡಲು ಈ ತಂತ್ರ ಮಾಡಿದ್ದಾರೆ. ಇದೆಲ್ಲವೂ ತಮ್ಮ ನಡುವೆ ಹೊಂದಾಣಿಕೆ ಇಲ್ಲ ಎಂದು ಸೂಚಿಸಲು ಯೋಜನೆ ಎಂದು ಅವರು ದೂರಿದರು.














