ಮನೆ Breaking News ‘45’ ಕನ್ನಡ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ…!

‘45’ ಕನ್ನಡ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ…!

0

ಶಿವರಾಜ್ ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ ನಟಿಸಿರುವ ‘45’ ಸಿನಿಮಾ ಕನ್ನಡದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಸಿನಿಮಾ ಅನ್ನು ಸಂಗೀತ ನಿರ್ದೇಶಕ ಅರ್ಜುನ ಜನ್ಯ ನಿರ್ದೇಶನ ಮಾಡಿದ್ದು, ಇದು ಅವರ ಮೊದಲ ನಿರ್ದೇಶನದ ಸಿನಿಮಾವಾಗಿದೆ. 45 ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ ಎಂದು ಈ ಮುಂಚೆ ಘೋಷಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದಾಗಿ ಈ ಸಿನಿಮಾ ಬಿಡುಗಡೆ ನಿಗದಿತ ದಿನಾಂಕಕ್ಕೆ ಮಾಡಲಾಗಲಿಲ್ಲ. ಇದೀಗ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಡಿಸೆಂಬರ್ 19 ರಂದು ಬಿಡುಗಡೆ ಆಗಲಿದೆ ಎಂದು ಘೋಷಣೆ ಮಾಡಿದೆ.

ಡಿಸೆಂಬರ್ ತಿಂಗಳಲ್ಲಿ ಬಿಡುಗಡೆ ಆಗುವ ಕನ್ನಡ ಸಿನಿಮಾಗಳು ದೊಡ್ಡ ಹಿಟ್ ಆದ ಉದಾಹರಣೆಗಳು ಕಳೆದ ಕೆಲ ವರ್ಷಗಳಲ್ಲಿ ಇವೆ. ಇದೀಗ ‘45’ ಸಿನಿಮಾ ಸಹ ಡಿಸೆಂಬರ್​​ ತಿಂಗಳಲ್ಲಿ ಬಿಡುಗಡೆಗೆ ಮುಂದಾಗಿದ್ದು, ಈ ಸಿನಿಮಾ ಸಹ ಹಿಟ್ ಆಗಲಿದೆಯೇ ಕಾದು ನೋಡಬೇಕಿದೆ. ಆದರೆ ಡಿಸೆಂಬರ್ ತಿಂಗಳಲ್ಲಿ ಕೆಲ ದೊಡ್ಡ ಸಿನಿಮಾಗಳು ಸಹ ಬಿಡುಗಡೆ ಆಗುತ್ತಿದೆ.

ಸಿನಿಮಾದ ನಿರ್ಮಾಪಕ ರಮೇಶ್ ರೆಡ್ಡಿ ಅವರು ಹೇಳಿರುವಂತೆ, ‘45’ ಸಿನಿಮಾದ ವಿತರಣೆ ಹಕ್ಕಿಗಾಗಿ ಮೈತ್ರಿ ಮೂವಿ ಮೇಕರ್ಸ್​ನವರು ಸಂಪರ್ಕ ಮಾಡಿದ್ದರಂತೆ. ಆದರೆ ಸಿನಿಮಾದ ಪೂರ್ಣ ಕೆಲಸ ಮುಗಿಸಿ, ಅದನ್ನು ವಿತರಕರಿಗೆ ತೋರಿಸದ ಬಳಿಕವಷ್ಟೆ ವಿತರಣೆ ಹಕ್ಕು ಮಾರಾಟ ಮಾಡುವ ಯೋಜನೆಯನ್ನು ನಿರ್ಮಾಪಕರು ಹಾಕಿಕೊಂಡಿದ್ದಾರೆ. ಹಾಗಾಗಿ ಈಗಲೇ ಯಾರಿಗೂ ಸಹ ವಿತರಣೆ ಹಕ್ಕು ನೀಡಿಲ್ಲ.

ಆಗಸ್ಟ್ 15ಕ್ಕೆ ಬಿಡುಗಡೆ ಆಗಬೇಕಿದ್ದ ಈ ಸಿನಿಮಾದ ಬಿಡುಗಡೆ ತಡವಾಗಲು ವಿಎಫ್​ಎಕ್ಸ್ ಕಾರಣವಂತೆ. ಅನೇಕ ಬ್ಲಾಕ್ ಬಸ್ಟರ್, ಆಸ್ಕರ್ ವಿಜೇತ ಹಾಲಿವುಡ್ ಸಿನಿಮಾಗಳಿಗೆ ವಿಎಫ್​ಎಕ್ಸ್ ಮಾಡಿರುವ ಮಾರ್ಜ್ ಸಂಸ್ಥೆ ‘45’ ಸಿನಿಮಾಕ್ಕೂ ವಿಎಫ್​ಎಕ್ಸ್ ಮಾಡುತ್ತಿದ್ದು, ಸಿನಿಮಾನಲ್ಲಿ ಗ್ರಾಫಿಕ್ಸ್ ಮತ್ತು ವಿಎಫ್​ಎಕ್ಸ್​ ಪ್ರಮುಖವಾಗಿದ್ದು ಇದೇ ಕಾರಣಕ್ಕೆ ಸಿನಿಮಾದ ಬಿಡುಗಡೆ ಆಗಸ್ಟ್ 15 ರಂದು ಆಗಲಿಲ್ಲವಂತೆ. ಮಾರ್ಜ್ ಸಂಸ್ಥೆ ಕೆನಡಾ ಮೂಲದ್ದಾಗಿದ್ದು ಈ ಸಂಸ್ಥೆಯ ಮುಖ್ಯ ತಂತ್ರಜ್ಞ ಯಶ್ ಗೌಡ ಸಹ ಈ ಬಗ್ಗೆ ಮಾತನಾಡಿದ್ದು, ‘45’ ನಮ್ಮ ಸಂಸ್ಥೆ ವಿಎಫ್​ಎಕ್ಸ್ ಮಾಡುತ್ತಿರುವ ಮೊದಲ ಕನ್ನಡ ಸಿನಿಮಾ ಆಗಿದೆ.

ಕತೆಯಲ್ಲಿ ವಿಎಫ್​ಎಕ್ಸ್​ಗೆ ಮಹತ್ವದ ಪಾತ್ರ ಇರುವ ಕಾರಣದಿಂದಾಗಿ ಹೆಚ್ಚಿನ ಜಾಗೃತೆಯಿಂದ ಕೆಲಸ ನಡೆಯುತ್ತಿದೆ. ಸೆಪ್ಟೆಂಬರ್ 16ರ ಒಳಗೆ ಸಿನಿಮಾದ ಎಲ್ಲ ವಿಎಫ್​ಎಕ್ಸ್ ಕಾರ್ಯ ಪೂರ್ಣಗೊಳ್ಳಲಿದೆ, ಅದಾದ ಒಂದು ತಿಂಗಳಲ್ಲಿ ಇನ್ನೊಂದಿಷ್ಟು ಕೆಲಸಗಳು ಇರಲಿವೆ. ಸಿನಿಮಾದ ಬಿಡುಗಡೆ ತಡವಾದರೂ ಸಿನಿಮಾದ ಗುಣಮಟ್ಟ ಅತ್ಯದ್ಭುತವಾಗಿರಲಿದೆ’ ಎಂದಿದ್ದಾರೆ.