ಬೆಂಗಳೂರು : ಅಕ್ರಮ ಆನ್ಲೈನ್ ಮತ್ತು ಆಫ್ಲೈನ್ ಬೆಟ್ಟಿಂಗ್ಗೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸನ ವೀರೇಂದ್ರ ಪಪ್ಪಿ ಮತ್ತು ಇತರರ ಮೇಲೆ ಒಟ್ಟು 30 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಲಾಗಿದೆ ಎಂದು ಇಡಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯಾದ್ಯಂತ 6, ಬೆಂಗಳೂರು ನಗರ 10, ಜೋಧ್ಪುರ 3, ಹುಬ್ಬಳ್ಳಿ 1, ಮುಂಬೈ 2 ಮತ್ತು ಗೋವಾದಲ್ಲಿರುವ ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ, ಬಿಗ್ ಡ್ಯಾಡಿ ಕ್ಯಾಸಿನೊ, ಹಾಗೂ ವೀರೇಂದ್ರ ಪಪ್ಪಿ ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಇತ್ಯಾದಿಗಳ ಹೆಸರಿನಲ್ಲಿ ಹಲವಾರು ಆನ್ಲೈನ್ ಬೆಟ್ಟಿಂಗ್ ಸೈಟ್ಗಳ ಮೇಲೆ ಇಡಿ ದಾಳಿ ನಡೆಸಲಾಗಿದೆ.
ಆರೋಪಿಯ ಸಹೋದರ ಕೆಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟ್ಟೆಕ್, ಟಿಆರ್ಎಸ್ ಟೆಕ್ನಾಲಜೀಸ್, ಪ್ರೈಮ್ 9 ಟೆಕ್ನಾಲಜೀಸ್ ಎಂಬ 3 ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆ. ಈ ಘಟಕಗಳು ಕೆಸಿ ವೀರೇಂದ್ರ ಅವರ ಕಾಲ್ ಸೆಂಟರ್ ಸೇವೆಗಳು ಮತ್ತು ಗೇಮಿಂಗ್ ವ್ಯವಹಾರಕ್ಕೆ ಸಂಬಂಧಿಸಿವೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ರಾಜರಾಜೇಶ್ವರಿನಗರದಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಎಚ್ ಅವರ ಸಹೋದರ ಅನಿಲ್ ಗೌಡ ವೀರೇಂದ್ರ ಪಪ್ಪಿ ಜೊತೆ ವ್ಯವಹಾರ ನಡೆಸಿದ ಹಿನ್ನೆಲೆಯಲ್ಲಿ ಅವರ ಮನೆಯ ಮೇಲೂ ದಾಳಿ ನಡೆಸಿ ದಾಖಲೆ ಪರಿಶೀಲಿಸಲಾಗಿದೆ.














