ಮನೆ ರಾಜ್ಯ ಅಂತರಾಷ್ಟ್ರೀಯ ಯೋಗ ದಿನ: ಶುಭ ಹಾರೈಸಿದ ಸಿದ್ದರಾಮಯ್ಯ

ಅಂತರಾಷ್ಟ್ರೀಯ ಯೋಗ ದಿನ: ಶುಭ ಹಾರೈಸಿದ ಸಿದ್ದರಾಮಯ್ಯ

0

ಬೆಂಗಳೂರು(Bengaluru): 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ  ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

 ‘ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ’ ಎನ್ನುವ ಮೂಲಕ ಪರೋಕ್ಷವಾಗಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದ್ದಾರೆ.

‘ಶ್ರದ್ಧೆ, ಬದ್ಧತೆ ಮತ್ತು ಸಹೃದಯತೆಯಿಂದ ಬೌದ್ಧಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗ ಮಾಡೋಣ. ಯೋಗ ಪ್ರಚಾರಕ್ಕಲ್ಲ, ಆರೋಗ್ಯಕ್ಕಾಗಿ. ಸರ್ವರಿಗೂ ಅಂತರರಾಷ್ಟ್ರೀಯ ಯೋಗ ದಿನದ ಶುಭಾಶಯಗಳು’ ಎಂದು ಅವರು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಜೂನ್ 21 ಅನ್ನು ಪ್ರತಿ ವರ್ಷ ಅಂತರರಾಷ್ಟ್ರೀಯ ಯೋಗ ದಿನವೆಂದು ಆಚರಿಸಲಾಗುತ್ತಿದೆ. ಈ ವರ್ಷ ಮೈಸೂರಿನಲ್ಲಿ ನಡೆದ ಯೋಗ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ.