ರಾಜ್ಯದಲ್ಲಿ ಸೆ.3ರವರೆಗೂ ಮಳೆ ಅಲರ್ಟ್ ನೀಡಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಮುನ್ಸೂಚನೆ ನೀಡಿದೆ. ಇಂದು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಿದ್ದು, ಉತ್ತರ ಕನ್ನಡ ಜಿಲ್ಲೆಗೆ ನಾಳೆವರೆಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ.31ರಿಂದ ಸೆ.3ರವರೆಗೂ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಸೆ.3ವರೆಗೂ ವ್ಯಾಪಕ ಮಳೆ ಆಗಲಿದೆ. ಬೆಂಗಳೂರಿನಲ್ಲಿ ಸೆ.3ರವರೆಗೂ ಹಗುರದಿಂದ, ಸಾಧಾರಣ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.















