ಮನೆ ರಾಷ್ಟ್ರೀಯ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೀಸಲಾತಿ ಕೋಟಾ 85%ಗೆ ಏರಿಕೆ; ತೇಜಸ್ವಿ ಯಾದವ್

ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಮೀಸಲಾತಿ ಕೋಟಾ 85%ಗೆ ಏರಿಕೆ; ತೇಜಸ್ವಿ ಯಾದವ್

0

ಪಾಟ್ನಾ : ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುವುದಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಹೇಳಿದ್ದಾರೆ.

ಬಿಹಾರದ ಮೋತಿಹಾರಿಯಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆಯ ಅಂಗವಾಗಿ ಸಂವಿಧಾನ ಸುರಕ್ಷಾ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಂವಿಧಾನವನ್ನು ದುರ್ಬಲಗೊಳಿಸುತ್ತಿದೆ. ಜನರು ತಮ್ಮ ಹಕ್ಕುಗಳನ್ನು ಕಾಪಾಡಲು ಒಂದಾಗಬೇಕು ಎಂದು ಹೇಳಿದರು.

ಈಗ ಮತ ಕಳ್ಳತನ, ಮುಂದೆ ಸರ್ಕಾರದ ಕ್ರಮಗಳು ಕ್ರಮೇಣ ನಾಗರಿಕರ ಹಕ್ಕುಗಳನ್ನು ಕಸಿದುಕೊಳ್ಳಬಹುದು. ಮೊದಲು, ಅವರು ನಿಮ್ಮ ಮತವನ್ನು, ನಂತರ ನಿಮ್ಮ ಪಡಿತರವನ್ನು, ನಂತರ ನಿಮ್ಮ ಪಿಂಚಣಿಯನ್ನು ಮತ್ತು ಅಂತಿಮವಾಗಿ ನಿಮ್ಮ ಆಸ್ತಿಗಳನ್ನು ಕಸಿದುಕೊಳ್ಳುತ್ತಾರೆ. ಪ್ರಜಾಪ್ರಭುತ್ವವನ್ನು ಸರ್ವಾಧಿಕಾರದಿಂದ ಬದಲಾಯಿಸಲಾಗುತ್ತದೆ ಎಂದರು.

ಇದೇ ವೇಳೆ ಮೀಸಲಾತಿ ಸೌಲಭ್ಯಗಳನ್ನು ಹೆಚ್ಚಿಸುವ ತಮ್ಮ ಪಕ್ಷದ ಭರವಸೆಯನ್ನು ಪುನರುಚ್ಛರಿಸಿದ ತೇಜಸ್ವಿ ಯಾದವ್, ‘ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮೀಸಲಾತಿ ಕೋಟಾವನ್ನು 85%ಗೆ ಏರಿಕೆ ಮಾಡುತ್ತೇವೆ ಎಂದರು. ಅಂತೆಯೇ ಜನರ ಹಕ್ಕುಗಳ ಅಡಿಪಾಯ ಸಂವಿಧಾನ ಎಂದು ಕರೆದ ತೇಜಸ್ವಿ, ಪ್ರಜಾಪ್ರಭುತ್ವವನ್ನು ರಕ್ಷಿಸಲು ಬಯಸಿದರೆ ಅಧಿಕಾರದಲ್ಲಿರುವವರನ್ನು ತೆಗೆದುಹಾಕುವಂತೆ ನಾಗರಿಕರನ್ನು ಒತ್ತಾಯಿಸಿದರು.