ಮನೆ ರಾಜ್ಯ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ: ಯೋಗ ತರಬೇತುದಾರ ಬಾಲು

ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಸಹಕಾರಿ: ಯೋಗ ತರಬೇತುದಾರ ಬಾಲು

0

ಯಳಂದೂರು(Yelandur) : ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಯೋಗ ಬಹಳ ಪ್ರಾಮುಖ್ಯತೆ ವಹಿಸಿದೆ ಎಂದು ತಾಲ್ಲೂಕಿನ ಯೋಗ ತರಬೇತುದಾರರಾದ ಬಾಲು ತಿಳಿಸಿದರು.

ತಾಲ್ಲೂಕಿನ ಮದ್ದೂರು ಗ್ರಾಮ ಪಂಚಾಯಿತಿಯಲ್ಲಿಂದು ಮಂಗಳವಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ದೇಹ ಮತ್ತು ಮನಸನ್ನು ನಿಯಂತ್ರಿಸುವಲ್ಲಿ ಯೋಗ ಮತ್ತು ಧ್ಯಾನ ಬಹಳ ಉಪಯುಕ್ತವಾಗಿದ್ದು ಪ್ರತಿಯೊಬ್ಬರು ಪ್ರತಿ ದಿನ ಯೋಗಾಭ್ಯಾಸ ಮಾಡಬೇಕು ಎಂದು ತಿಳಿಸಿದರು.

ಯೋಗ ಮಾಡುವುದರಿಂದ ತಲೆನೋವು, ಬೆನ್ನುನೋವು, ಹೊಟ್ಟೆನೋವು, ಕೈ ಕಾಲು, ಮಂಡಿ ನೋವು, ಉಸಿರಾಟದ ಸಮಸ್ಯೆ, ಬಿಪಿ, ಶುಗರ್ ಹಾಗೂ ಇತ್ಯಾದಿ ಖಾಯಿಲೆಗಳಿಂದ ದೂರವಿದ್ದು ನೆಮ್ಮದಿಯ ಜೀವನ ನಡೆಸಲು ಯೋಗ ಸಹಕಾರಿಯಾಗಿದೆ ಎಂದು ಸಲಹೆ ನೀಡಿದರು.

ನಂತರ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ ಮಾತನಾಡಿ, ಯೋಗ ಮತ್ತು ಧ್ಯಾನ ಮಾಡುವುದರಿಂದ ದಿನ ನಿತ್ಯ ಕ್ರಿಯಾಶೀಲರಾಗಿರಬಹುದು ಮತ್ತು ಮಾನಸಿಕವಾಗಿ ನೆಮ್ಮದಿಯಾಗಿರಬಹುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಗಜೇಂದ್ರ, ನರೇಗಾ  ಯೋಜನೆಯ ತಾಲ್ಲೂಕು ಐ.ಇ.ಸಿ  ಸಂಯೋಜಕ ಹರೀಶ್, ಬಿ.ಎಫ್.ಟಿ ನಿಂಗರಾಜು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ . . .45 ನಿಮಿಷಕ್ಕೂ ಹೆಚ್ಚು ಕಾಲ ಉತ್ಸಾಹದಿಂದ ಯೋಗಾಸನ ಮಾಡಿದ ಪ್ರಧಾನಿ ಮೋದಿ