ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನ ಬೆಂಗಳೂರಿನ ಹಲವೆಡೆ ಹಗುರದಿಂದ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇಂದು ನಗರದ ಹಲವೆಡೆ ಮಳೆ ಶುರುವಾಗಿದ್ದು, ವಾಹನ ಸವಾರರು ಪರದಾಡು ಸ್ಥಿತಿ ಎದುರುವಾಗಿದೆ. ವಿಧಾನಸೌಧ, ಚಾಲುಕ್ಯ ಸರ್ಕಲ್, ಕೆ ಆರ್ ಸರ್ಕಲ್, ಕಾರ್ಪೋರೇಷನ್ ಸರ್ಕಲ್, ಕೆ ಆರ್ ಮಾರ್ಕೆಟ್, ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ.















